ETV Bharat / state

ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆ ಆರಂಭ: ಎರಡು ದಿನದಲ್ಲಿ ಸಲ್ಲಿಕೆಯಾದ ಅರ್ಜಿಗಳೆಷ್ಟು?

ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಕಳೆದ ಎರಡು ದಿನಗಳಲ್ಲಿ ಒಟ್ಟು 2,032 ಅರ್ಜಿಗಳನ್ನು ಸ್ವೀಕಾರ ಮಾಡಲಾಗಿದೆ.

yuva nidhi
ಯುವನಿಧಿ ಯೋಜನೆ
author img

By ETV Bharat Karnataka Team

Published : Dec 28, 2023, 6:48 AM IST

Updated : Dec 28, 2023, 1:46 PM IST

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಕೊನೆಯ ಹಾಗೂ ಐದನೇ ಗ್ಯಾರಂಟಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಈವರೆಗೆ ಯುವನಿಧಿಗೆ ಅರ್ಜಿ ಸಲ್ಲಿಸಿದ ನಿರುದ್ಯೋಗಿಗಳೆಷ್ಟು ಎಂಬ ವರದಿ ಇಲ್ಲಿದೆ ನೋಡಿ.

ಸಿಎಂ ಸಿದ್ದರಾಮಯ್ಯನವರು ಕಾಂಗ್ರೆಸ್ ಸರ್ಕಾರದ ಐದನೇ ಹಾಗೂ ಕೊನೆಯ ಗ್ಯಾರಂಟಿ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ. ಡಿ.26 ರಂದು ಚಾಲನೆ ನೀಡಲಾಗಿದೆ. ರಾಜ್ಯದ ಪದವೀಧರರು, ಡಿಪ್ಲೋಮಾ ಪಡೆದವರಿಗೆ ನಿರುದ್ಯೋಗ ಭತ್ಯೆ ನೀಡುವ ಯೋಜನೆ ಇದಾಗಿದೆ. ಈ ಯೋಜನೆಯಡಿ ರಾಜ್ಯದಲ್ಲಿ 2022-23ರಲ್ಲಿ ತೇರ್ಗಡೆಯಾದ ಪದವೀಧರು ಪ್ರತಿ ತಿಂಗಳು 3,000 ರೂ., ಡಿಪ್ಲೋಮಾ ಹೊಂದಿದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 1,500 ರೂ. ರಂತೆ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಜನವರಿಯಲ್ಲಿ ಅರ್ಹ ನಿರುದ್ಯೋಗಿಗಳ ಖಾತೆಗೆ ಹಣ ಜಮೆಯಾಗಲಿದೆ.

ಈವರೆಗೆ ಎಷ್ಟು ಅರ್ಜಿ ಸ್ವೀಕಾರ ?: ಡಿ.26 ಕ್ಕೆ ಸಿಎಂ ಸಿದ್ದರಾಮಯ್ಯ ಅವರು ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ್ದರು.‌ ಕೌಶಲ್ಯಾಭಿವೃದ್ಧಿ ಇಲಾಖೆ ನೀಡಿದ ಅಂಕಿಅಂಶದಂತೆ ಡಿ.27ರ ಸಂಜೆ ಆರು ಗಂಟೆವರೆಗೆ ಯುವನಿಧಿ ಯೋಜನೆಯಡಿ ಒಟ್ಟು 2,032 ಅರ್ಜಿ ಸ್ವೀಕರಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್​ನಲ್ಲಿ ಯುವನಿಧಿ ಭತ್ಯಗೆ ಅರ್ಜಿ ಸಲ್ಲಿಸಬಹುದಾಗಿದೆ. ಆ ಮೂಲಕ ಬುಧವಾರ ಸಂಜೆ 6 ಗಂಟೆವರೆಗೆ 2,032 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

2023ರಲ್ಲಿ ತೇರ್ಗಡೆಯಾದ ದಿನಾಂಕದಿಂದ 180 (6 ತಿಂಗಳು) ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ನಿರುದ್ಯೋಗ ವ್ಯಕ್ತಿಗೆ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ಹಣ ನೀಡಲು ಯುವ ನಿಧಿ ಯೋಜನೆಯನ್ನು ಈ ಕೆಲ ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲು ಆದೇಶಿಸಲಾಗಿದೆ.

ಷರತ್ತು ಮತ್ತು ನಿಬಂಧನೆಗಳು :

1) ಪದವಿ, ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವವರಿಗೆ (Domicile of Karnataka) ಮಾತ್ರ ಈ ಯೋಜನೆ ಅನ್ವಯವಾಗಲಿದೆ.

2) ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರ ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಸೌಲಭ್ಯವನ್ನು ಸ್ಥಗಿತಗೊಳಿಸಲಾಗುವುದು.

3) ಭತ್ಯೆಯನ್ನು DBT ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.

4) ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವಯಂ ಪರಿಶೀಲನೆ ಇರಬೇಕು. ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲರಾದರೆ ದಂಡ ವಿಧಿಸಲಾಗುವುದು.

ಯೋಜನೆಗೆ ಅರ್ಹರಲ್ಲದವರು ಯಾರು? :

  1. ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುವವರಿಗೆ ಈ ಯೋಜನೆಯ ಸೌಲಭ್ಯ ಸಿಗುವುದಿಲ್ಲ.
  2. Apprentice ವೇತನವನ್ನು ಪಡೆಯುತ್ತಿರುವವರು
  3. ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದವರು
  4. ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರಿಗೆ ಈ ಯೋಜನೆ ಅನ್ವಯವಾಗುವುದಿಲ್ಲ.

ಇದನ್ನೂ ಓದಿ : ಯುವನಿಧಿ ನೋಂದಣಿಗೆ ಚಾಲನೆ: ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ, ರಾಜ್ಯ ದಿವಾಳಿಯಾಗಿಲ್ಲ; ಸಿದ್ದರಾಮಯ್ಯ

Last Updated : Dec 28, 2023, 1:46 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.