ಬೆಂಗಳೂರು: ಪಾದರಾಯನಪುರದಲ್ಲಿ ನಡೆದ ಘಟನೆ ಸಂಬಂಧ ಸರಣಿ ಟ್ವೀಟ್ ಮಾಡುವ ಮೂಲಕ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಸ್ಪಷ್ಟೀಕರಣ ನೀಡಿದ್ದಾರೆ.
ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಅವರು, ಪಾದರಾಯನಪುರದಲ್ಲಿ ಇಂಥದ್ದೊಂದು ಘಟನೆ ನಡೆದಿದೆ ಎಂದು ನನ್ನಿಂದ ಇನ್ನೂ ಕೂಡ ನಂಬಲು ಸಾಧ್ಯವಾಗುತ್ತಿಲ್ಲ. ತಮ್ಮನ್ನು ಉಳಿಸಲು ಬಂದವರ ಮೇಲೆ ಜನ ಹಲ್ಲೆಗೆ ಮುಂದಾಗಿರುವುದು ಅತ್ಯಂತ ನೋವಿನ ಸಂಗತಿ. ನಾನು ಯಾರಿಗೂ ನನ್ನ ಅಪ್ಪಣೆ ಪಡೆದು ಚಾಮರಾಜಪೇಟೆಗೆ ಬರಬೇಕು ಎಂದು ಎಲ್ಲಿಯೂ ಹೇಳಿಲ್ಲ. ನನ್ನ ಕ್ಷೇತ್ರವೂ ಇತರ ಕ್ಷೇತ್ರಗಳಂತೆ ಒಂದು ಸಾಮಾನ್ಯ ಕ್ಷೇತ್ರ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿರುವುದಕ್ಕೆ ಸಾಕಷ್ಟು ನೋವಾಗಿದೆ ಎಂದಿದ್ದಾರೆ.
-
ಪಾದರಾಯನಪುರದಲ್ಲಿ ಇಂಥದ್ದೊಂದು ಘಟನೆ ನಡೆದಿದೆ ಎಂದು ನನ್ನಿಂದ ಇನ್ನೂ ಕೂಡ ನಂಬಲು ಸಾಧ್ಯವಾಗುತ್ತಿಲ್ಲ, ತಮ್ಮನ್ನೇ ಉಳಿಸಲು ಬಂದವರ ಮೇಲೆ ಜನ ಹಲ್ಲೆಗೆ ಮುಂದಾಗಿರುವುದು ಅತ್ಯಂತ ನೋವಿನ ಸಂಗತಿ. 1/10#Covid_19india
— B Z Zameer Ahmed Khan (@BZZameerAhmedK) April 21, 2020 " class="align-text-top noRightClick twitterSection" data="
">ಪಾದರಾಯನಪುರದಲ್ಲಿ ಇಂಥದ್ದೊಂದು ಘಟನೆ ನಡೆದಿದೆ ಎಂದು ನನ್ನಿಂದ ಇನ್ನೂ ಕೂಡ ನಂಬಲು ಸಾಧ್ಯವಾಗುತ್ತಿಲ್ಲ, ತಮ್ಮನ್ನೇ ಉಳಿಸಲು ಬಂದವರ ಮೇಲೆ ಜನ ಹಲ್ಲೆಗೆ ಮುಂದಾಗಿರುವುದು ಅತ್ಯಂತ ನೋವಿನ ಸಂಗತಿ. 1/10#Covid_19india
— B Z Zameer Ahmed Khan (@BZZameerAhmedK) April 21, 2020ಪಾದರಾಯನಪುರದಲ್ಲಿ ಇಂಥದ್ದೊಂದು ಘಟನೆ ನಡೆದಿದೆ ಎಂದು ನನ್ನಿಂದ ಇನ್ನೂ ಕೂಡ ನಂಬಲು ಸಾಧ್ಯವಾಗುತ್ತಿಲ್ಲ, ತಮ್ಮನ್ನೇ ಉಳಿಸಲು ಬಂದವರ ಮೇಲೆ ಜನ ಹಲ್ಲೆಗೆ ಮುಂದಾಗಿರುವುದು ಅತ್ಯಂತ ನೋವಿನ ಸಂಗತಿ. 1/10#Covid_19india
— B Z Zameer Ahmed Khan (@BZZameerAhmedK) April 21, 2020
ಲಾಕ್‌ಡೌನ್ ಪ್ರಾರಂಭವಾದ ದಿನದಿಂದ ಹಿಡಿದು ನಿನ್ನೆ ಸಂಜೆಯವರೆಗೂ ಹಗಲು ರಾತ್ರಿಯೆನ್ನದೆ ನಾನು ಕ್ಷೇತ್ರದಲ್ಲಿದ್ದು, ಅಧಿಕಾರಿಗಳಿಗೆ ಸ್ಪಂದಿಸಿ ಕೊರೊನಾ ನಿಯಂತ್ರಣಕ್ಕೆ ಬರಬೇಕೆಂದು ಜನರು ಮತ್ತು ಸರ್ಕಾರದ ನಡುವಿನ ಕೊಂಡಿಯಾಗಿ ನಿಂತು ಯಾವುದೇ ರೀತಿಯ ಗೊಂದಲ ಆಗದಂತೆ ನೋಡಿಕೊಂಡಿದ್ದೇನೆ. ನಿನ್ನೆ ಘಟನೆ ನಡೆಯಬಾರದಿತ್ತು, ಆದರೆ ನಡೆದಿದೆ. ಅದಕ್ಕೆ ನನ್ನ ವಿಷಾದವಿದೆ. ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕ್ರಮಕೈಗೊಳ್ಳಲಿ. ಮುಂದೆ ಇಂತಹ ಘಟನೆಗಳು ನನ್ನ ಕ್ಷೇತ್ರ ಮಾತ್ರವಲ್ಲ, ಇಡೀ ರಾಜ್ಯದಲ್ಲಿ ನಡೆಯದಂತೆ ಎಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದು ಹೇಳಿದ್ದಾರೆ.
-
ನಾನು ಯಾರಿಗೂ ನನ್ನ ಅಪ್ಪಣೆ ಪಡೆದು ಚಾಮರಾಜಪೇಟೆಗೆ ಬರಬೇಕು ಎಂದು ಎಲ್ಲಿಯೂ ಹೇಳಿಲ್ಲ, ಹೇಳುವುದು ಇಲ್ಲ. ನನ್ನ ಕ್ಷೇತ್ರವೂ ಇತರ ಕ್ಷೇತ್ರಗಳಂತೆ ಒಂದು ಸಾಮಾನ್ಯ ಕ್ಷೇತ್ರ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿರುವುದಕ್ಕೆ ಸಾಕಷ್ಟು ನೋವಾಗಿದೆ. 2/10 #Covid19India
— B Z Zameer Ahmed Khan (@BZZameerAhmedK) April 21, 2020 " class="align-text-top noRightClick twitterSection" data="
">ನಾನು ಯಾರಿಗೂ ನನ್ನ ಅಪ್ಪಣೆ ಪಡೆದು ಚಾಮರಾಜಪೇಟೆಗೆ ಬರಬೇಕು ಎಂದು ಎಲ್ಲಿಯೂ ಹೇಳಿಲ್ಲ, ಹೇಳುವುದು ಇಲ್ಲ. ನನ್ನ ಕ್ಷೇತ್ರವೂ ಇತರ ಕ್ಷೇತ್ರಗಳಂತೆ ಒಂದು ಸಾಮಾನ್ಯ ಕ್ಷೇತ್ರ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿರುವುದಕ್ಕೆ ಸಾಕಷ್ಟು ನೋವಾಗಿದೆ. 2/10 #Covid19India
— B Z Zameer Ahmed Khan (@BZZameerAhmedK) April 21, 2020ನಾನು ಯಾರಿಗೂ ನನ್ನ ಅಪ್ಪಣೆ ಪಡೆದು ಚಾಮರಾಜಪೇಟೆಗೆ ಬರಬೇಕು ಎಂದು ಎಲ್ಲಿಯೂ ಹೇಳಿಲ್ಲ, ಹೇಳುವುದು ಇಲ್ಲ. ನನ್ನ ಕ್ಷೇತ್ರವೂ ಇತರ ಕ್ಷೇತ್ರಗಳಂತೆ ಒಂದು ಸಾಮಾನ್ಯ ಕ್ಷೇತ್ರ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿರುವುದಕ್ಕೆ ಸಾಕಷ್ಟು ನೋವಾಗಿದೆ. 2/10 #Covid19India
— B Z Zameer Ahmed Khan (@BZZameerAhmedK) April 21, 2020
ಕೊರೊನಾ ವಿರುದ್ಧ ದೇಶ ಹೋರಾಡುತ್ತಿದೆ. ನನ್ನ ಜನ ಈ ರೀತಿ ವರ್ತಿಸುತ್ತಾರೆ ಎಂದು ನಾನು ಭಾವಿಸಿರಲಿಲ್ಲ. ಯಾರೋ ಒಂದಷ್ಟು ಜನರ ದುರ್ವರ್ತನೆಗೆ ಇಡೀ ಸಮುದಾಯವನ್ನು ದೂರುವುದು ಸರಿಯಲ್ಲ. ಧರ್ಮಾತೀತವಾಗಿ ಕೊರೊನಾ ವಿರುದ್ಧ ದೇಶ ಹೋರಾಡುತ್ತಿದೆ. ಇದು ಒಂದಾಗಬೇಕಾದ ಸಮಯವೇ ಹೊರತು, ಸಮಾಜ ಒಡೆಯುವ ಸಮಯವಲ್ಲ. ಮಾಧ್ಯಮದ ಸ್ನೇಹಿತರು ಎಲ್ಲರೂ ಒಟ್ಟಾಗಿ ನನ್ನ ಮೇಲೆ ಮುಗಿ ಬಿದ್ದಿದ್ದರಿಂದ ಅನಿವಾರ್ಯವಾಗಿ ಉತ್ತರಿಸದೆ ಹೊರ ನಡೆಯಬೇಕಾಯಿತು. ಘಟನೆಯ ಬಗ್ಗೆ ಮಾಧ್ಯಮ ಮಿತ್ರರಿಗಿದ್ದ ಆಕ್ರೋಶ, ನೋವಿನ ಅರಿವು ನನಗಿದೆ. ಇಂತಹ ಒಂದು ದುರ್ಘಟನೆ ನಡೆದ ನಂತರ ಈ ರೀತಿ ಆಕ್ರೋಶಭರಿತ ಮಾತುಗಳು ಬರುವುದು ಸಹಜ ಎಂಬ ಸ್ಪಷ್ಟೀಕರಣ ನೀಡಿದ್ದಾರೆ.
-
ಮಾಧ್ಯಮದ ಸ್ನೇಹಿತರು ಎಲ್ಲರೂ ಒಟ್ಟಾಗಿ ನನ್ನ ಮೇಲೆ ಮುಗಿಬಿದ್ದಿದ್ದರಿಂದ ಅನಿವಾರ್ಯವಾಗಿ ಉತ್ತರಿಸದೆ ಹೊರನಡೆಯಬೇಕಾಯಿತು. ಘಟನೆಯ ಬಗ್ಗೆ ಮಾಧ್ಯಮ ಮಿತ್ರರಿಗಿದ್ದ ಆಕ್ರೋಶ, ನೋವಿನ ಅರಿವು ನನಗಿದೆ. ಇಂತಹ ಒಂದು ದುರ್ಘಟನೆ ನಡೆದ ನಂತರ ಈ ರೀತಿ ಆಕ್ರೋಶಭರಿತ ಮಾತುಗಳು ಬರುವುದು ಸಹಜ. 6/10#Covid19India
— B Z Zameer Ahmed Khan (@BZZameerAhmedK) April 21, 2020 " class="align-text-top noRightClick twitterSection" data="
">ಮಾಧ್ಯಮದ ಸ್ನೇಹಿತರು ಎಲ್ಲರೂ ಒಟ್ಟಾಗಿ ನನ್ನ ಮೇಲೆ ಮುಗಿಬಿದ್ದಿದ್ದರಿಂದ ಅನಿವಾರ್ಯವಾಗಿ ಉತ್ತರಿಸದೆ ಹೊರನಡೆಯಬೇಕಾಯಿತು. ಘಟನೆಯ ಬಗ್ಗೆ ಮಾಧ್ಯಮ ಮಿತ್ರರಿಗಿದ್ದ ಆಕ್ರೋಶ, ನೋವಿನ ಅರಿವು ನನಗಿದೆ. ಇಂತಹ ಒಂದು ದುರ್ಘಟನೆ ನಡೆದ ನಂತರ ಈ ರೀತಿ ಆಕ್ರೋಶಭರಿತ ಮಾತುಗಳು ಬರುವುದು ಸಹಜ. 6/10#Covid19India
— B Z Zameer Ahmed Khan (@BZZameerAhmedK) April 21, 2020ಮಾಧ್ಯಮದ ಸ್ನೇಹಿತರು ಎಲ್ಲರೂ ಒಟ್ಟಾಗಿ ನನ್ನ ಮೇಲೆ ಮುಗಿಬಿದ್ದಿದ್ದರಿಂದ ಅನಿವಾರ್ಯವಾಗಿ ಉತ್ತರಿಸದೆ ಹೊರನಡೆಯಬೇಕಾಯಿತು. ಘಟನೆಯ ಬಗ್ಗೆ ಮಾಧ್ಯಮ ಮಿತ್ರರಿಗಿದ್ದ ಆಕ್ರೋಶ, ನೋವಿನ ಅರಿವು ನನಗಿದೆ. ಇಂತಹ ಒಂದು ದುರ್ಘಟನೆ ನಡೆದ ನಂತರ ಈ ರೀತಿ ಆಕ್ರೋಶಭರಿತ ಮಾತುಗಳು ಬರುವುದು ಸಹಜ. 6/10#Covid19India
— B Z Zameer Ahmed Khan (@BZZameerAhmedK) April 21, 2020
ಈ ಒಂದು ಘಟನೆಯಿಂದ ನನ್ನ ಹೆಸರಿಗೆ ಮಸಿ ಬಳಿಯಲು ಎಷ್ಟೇ ಪ್ರಯತ್ನಿಸಿದರೂ ನಾನು ಜನಸೇವೆಯಿಂದ ಹಿಂದೆ ಸರಿಯುವವನಲ್ಲ. ಮಾನವೀಯತೆಯೇ ನನ್ನ ಧರ್ಮ. ಹಣ, ಅಧಿಕಾರ ಯಾವುದೂ ಶಾಶ್ವತವಲ್ಲ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರೂ ನನ್ನ ಸಹೋದರ, ಸಹೋದರಿಯರಿದ್ದಂತೆ. ಇವರೆಲ್ಲರ ಜೊತೆ ಸದಾ ಇರುತ್ತೇನೆ. ಮುಂದೆ ಇಂಥ ಘಟನೆ ಮತ್ತೆ ಮರುಕಳಿಸದಂತೆ ನೋಡಿಕೊಳ್ಳಲು ಅಗತ್ಯ ಮುಂಜಾಗ್ರತೆ ವಹಿಸಲಾಗುತ್ತದೆ. ನನ್ನ ಕ್ಷೇತ್ರದ ಜನತೆ ಎಂದಿನಂತೆ ಮುಂದೆಯೂ ಸರ್ಕಾರ, ವೈದ್ಯಕೀಯ ಸಿಬ್ಬಂದಿಗೆ ಸಂಪೂರ್ಣ ಸಹಕಾರ ನೀಡುತ್ತಾರೆ ಎಂಬ ಭರವಸೆ ನನಗಿದೆ. ನಮ್ಮೆಲ್ಲರ ಗುರಿ ಕೊರೊನಾ ನಿರ್ಮೂಲನೆ ಎಂದು ಹೇಳಿದ್ದಾರೆ.