ETV Bharat / state

15 ಇಲಾಖೆಗಳ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯ, ಕೇಂದ್ರ ಸರ್ಕಾರಗಳಿಂದ ಶೂನ್ಯ ಅನುದಾನ! - etv bharat kannada

ಕೇಂದ್ರ ಪುರಸ್ಕೃತ ಯೋಜನೆಗಳಿಗೆ 2023-24 ಸಾಲಿನಲ್ಲಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅನುದಾನ ಎಷ್ಟು ಎಂಬ ಬಗ್ಗೆ ಕೆಡಿಪಿ ಸಭೆಯಲ್ಲಿ ನೀಡಿರುವ ಅಂಕಿ - ಅಂಶ ಸಮೇತ ಮಾಹಿತಿ ಇಲ್ಲಿದೆ.

zero-grant-from-state-and-central-governments-to-central-sponsored-scheme
15 ಇಲಾಖೆಗಳ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯ, ಕೇಂದ್ರ ಸರ್ಕಾರಗಳಿಂದ ಶೂನ್ಯ ಅನುದಾನ!
author img

By ETV Bharat Karnataka Team

Published : Sep 9, 2023, 3:54 PM IST

ಬೆಂಗಳೂರು: ರಾಜ್ಯದಲ್ಲಿ ಹಲವು ಕೇಂದ್ರ ಪುರಸ್ಕೃತ ಯೋಜನೆಗಳು ಜಾರಿಯಲ್ಲಿವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನುದಾನದೊಂದಿಗೆ ಯೋಜನೆ ಜಾರಿಯಾಗುತ್ತದೆ.‌ ಆದರೆ, ಹಲವು ಯೋಜನೆಗಳಿಗೆ ಕೇಂದ್ರ ಸರ್ಕಾರ ಮಾತ್ರವಲ್ಲ ಇತ್ತ ರಾಜ್ಯ ಸರ್ಕಾರವೂ ಈವರೆಗೆ ಅನುದಾನ ಬಿಡುಗಡೆ ಮಾಡಿಲ್ಲ. ರಾಜ್ಯದಲ್ಲಿ ಹಲವು ಇಲಾಖೆಗಳಲ್ಲಿ ಕೇಂದ್ರ ಅನುದಾನದೊಂದಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಅನೇಕ ಪ್ರಮುಖ ಯೋಜನೆಗಳಿಗೆ ಕೇಂದ್ರ ಹಾಗೂ ರಾಜ್ಯದ ಅನುದಾನದೊಂದಿಗೆ ಅನುಷ್ಠಾನವಾಗುತ್ತಿದೆ.

ರಾಜ್ಯದ 28 ಇಲಾಖೆಗಳಲ್ಲಿ ವಿವಿಧ ಯೋಜನೆಗಳು ಕೇಂದ್ರ ಪುರಸ್ಕೃತ ಯೋಜನೆಗಳಾಗಿವೆ. ಕೇಂದ್ರ ಪುರಸ್ಕೃತ ಯೋಜನೆಗಳ ಪೈಕಿ ಕೆಲವು ಯೋಜನೆಗಳಿಗೆ ಬಹುಪಾಲು ರಾಜ್ಯ ಸರ್ಕಾರ ಅನುದಾನ ನೀಡಿದರೆ, ಇನ್ನು ಕೆಲ ಯೋಜನೆಗಳಿಗೆ ಬಹುಪಾಲು ಅನುದಾನ ಕೇಂದ್ರ ಸರ್ಕಾರದ್ದಾಗಿದೆ.
ಸದ್ಯ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಹೋಗಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಅನುದಾನ ಬಿಡುಗಡೆ ವಿಚಾರವಾಗಿ ಘರ್ಷಣೆ ಏರ್ಪಡುವುದು ಸಹಜ.‌ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡದಿರುವ ಬಗ್ಗೆ ಕಾಂಗ್ರೆಸ್ ಸರ್ಕಾರ ಆರೋಪ ಮಾಡುತ್ತಿದೆ.

ಕೇಂದ್ರ ಸರ್ಕಾರವೂ ಅನುದಾನ ಬಿಡುಗಡೆಗೆ ಮೀನಮೇಷ ಮಾಡುತ್ತಿರುವುದು ಹೌದು. ಹಲವು ಯೋಜನೆಗಳಿಗೆ ಅತ್ಯಲ್ಪ ಅಥವಾ ಶೂನ್ಯ ಅನುದಾನ ಬಿಡುಗಡೆಯಾಗಿದೆ. ಆದರೆ, ಇತ್ತ ರಾಜ್ಯ ಸರ್ಕಾರ 2023-24 ಸಾಲಿನಲ್ಲಿ ಆಗಸ್ಟ್ ತಿಂಗಳವರೆಗೆ ಹಲವು ಇಲಾಖೆಯ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ತನ್ನ ಪಾಲಿನ ಅನುದಾನ ಬಿಡುಗಡೆ ಮಾಡಿಲ್ಲ.

ಒಟ್ಟು ಅನುದಾನ ಹಂಚಿಕೆ, ಬಳಕೆ ವಿವರ: ಕೇಂದ್ರ ಪುರಸ್ಕೃತ ಯೋಜನೆಗಳಿಗೆ 2023-24 ಸಾಲಿನಲ್ಲಿ ರಾಜ್ಯ ಸರ್ಕಾರದ ಪಾಲು 18,209.30 ಕೋಟಿ ರೂ. ಇದೆ. ಕೇಂದ್ರ ಸರ್ಕಾರದ ಪಾಲು 17,015.61 ಕೋಟಿ ರೂ. ಇದೆ. ಈವರೆಗೆ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿಯಾಗಿದ್ದು, ಕೇವಲ ಶೇ 19ರಷ್ಟು ಮಾತ್ರ. ಈ ಪೈಕಿ ರಾಜ್ಯ ಸರ್ಕಾರ ಆಗಸ್ಟ್ ವರೆಗೆ ತನ್ನ ಪಾಲಿನ ಪೈಕಿ 4,375.24 ಕೋಟಿ ರೂ. ಬಿಡುಗಡೆ ಮಾಡಿದೆ. ಆಗಸ್ಟ್ ವರೆಗೆ ಕೇಂದ್ರ ಪುರಸ್ಕೃತ ಯೋಜನೆಗಳಿಗಾಗಿ ರಾಜ್ಯ ಮಾಡಿರುವ ವೆಚ್ಚ 4,535.28 ಕೋಟಿ ರೂ. ಆಗಿದೆ. ಅಂದರೆ ರಾಜ್ಯ ಸರ್ಕಾರ ಆಗಸ್ಟ್ ವರೆಗೆ ಒಟ್ಟು ಶೇ 24ರಷ್ಟು ಅನುದಾನ ಬಿಡುಗಡೆ ಮಾಡಿದೆ ಎಂದು ಕೆಡಿಪಿ ಸಭೆಯ ಅಂಕಿ - ಅಂಶಗಳಿಂದ ಮಾಹಿತಿ ಲಭಿಸಿದೆ.

ಇತ್ತ ಕೇಂದ್ರ ಸರ್ಕಾರ ಆಗಸ್ಟ್ ವರೆಗೆ ತನ್ನ ಪಾಲಿನ ಪೈಕಿ 1,322.52 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರ ಮಾಡಿರುವ ವೆಚ್ಚ 2,234.72 ಕೋಟಿ ರೂ. ಆಗಿದೆ. ಕೇಂದ್ರ ಸರ್ಕಾರ ಒಟ್ಟು ಹಂಚಿಕೆ ಪೈಕಿ 7.77ರಷ್ಟು ಮಾತ್ರ ಅನುದಾನ ಬಿಡುಗಡೆ ಮಾಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಕೇಂದ್ರ ಸರ್ಕಾರ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಅಲ್ಪ, ಶೂನ್ಯ ಅನುದಾನ ಬಿಡುಗಡೆ ಮಾಡಿರುವ ಬಗ್ಗೆ ಈಗಾಗಲೇ ಈಟಿವಿ ಭಾರತ್​ ವರದಿ ಮಾಡಿತ್ತು.

15 ಇಲಾಖೆಗಳ ಯೋಜನೆಗಳಿಗೆ ರಾಜ್ಯದಿಂದ ಹಣ ಬಿಡುಗಡೆ ಭಾಗ್ಯ ಇಲ್ಲ: ರಾಜ್ಯ ಸರ್ಕಾರವೂ ಹಲವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ತನ್ನ ಪಾಲಿನ ಅನುದಾನವನ್ನು ಇನ್ನೂ ಬಿಡುಗಡೆ ಮಾಡಿಲ್ಲ ಎಂಬುದು ಕೆಡಿಪಿ ಸಭೆಯಲ್ಲಿ ಮಂಡಿಸಿದ ಅಂಕಿ - ಅಂಶದಿಂದ ಸ್ಪಷ್ಟವಾಗಿದೆ. ಕೆಡಿಪಿ ಸಭೆಯಲ್ಲಿನ ಪ್ರಗತಿ ಪರಿಶೀಲನೆ ಅಂಕಿ - ಅಂಶದ ಪ್ರಕಾರ 15 ಇಲಾಖೆಗಳಡಿಯ ವಿವಿಧ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಆಗಸ್ಟ್ ವರೆಗೆ ರಾಜ್ಯ ಸರ್ಕಾರ ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ.

ಕೇಂದ್ರ ಸರ್ಕಾರವೂ 15 ಇಲಾಖೆಗಳಿಗೆ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಿಲ್ಲ. ರಾಜ್ಯ ಸರ್ಕಾರ ಪ್ರಮುಖವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಹಕಾರ ಇಲಾಖೆ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ, ಅರಣ್ಯ ಇಲಾಖೆ, ಗೃಹ ಇಲಾಖೆ, ವಸತಿ ಇಲಾಖೆ, ಮೂಲ ಸೌಕರ್ಯ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಸಣ್ಣ ನೀರಾವರಿ ಇಲಾಖೆ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಜಲಸಂಪನ್ಮೂಲ ಇಲಾಖೆಯ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಿಡಿ ಗಾಸು ಅನುದಾನ ಬಿಡುಗಡೆ ಮಾಡಿಲ್ಲ.

ಪ್ರಮುಖ ಕೇಂದ್ರ ಪುರಸ್ಕೃತ ಯೋಜನೆಗಳಾದ ಪಿಎಂ ಆಯುಷ್ಮಾನ್ ಭಾರತ ಆರೋಗ್ಯ ಮೂಲಸೌಕರ್ಯ ಮಿಷನ್, ಪಿಎಂ ಆವಾಸ್​ ಯೋಜನೆ (ನಗರ), ಪಿಎಂ ಆವಾಸ್​ ಯೋಜನೆ (ಗ್ರಾಮೀಣ), ಗ್ರಾಮೀಣ ಜಲಜೀವನ್ ಮಿಷನ್, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ಸ್ವಚ್ಛ ಭಾರತ ಯೋಜನೆ, ಪಿಎಂ ಗ್ರಾಮೀಣ ರಸ್ತೆ ಯೋಜನೆ, ವಿವಿಧ ನೀರಾವರಿ ನಿಗಮಗಳಡಿಯ ನೀರಾವರಿ ಯೋಜನೆಗಳು, ಬೆಂಗಳೂರು ಸ್ಮಾರ್ಟ್ ಸಿಟಿ, ಬೆಳಗಾವಿ ಸ್ಮಾರ್ಟ್ ಸಿಟಿ, ದಾವಣಗೆರೆ ಸ್ಮಾರ್ಟ್ ಸಿಟಿ, ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ, ಮಂಗಳೂರು ಸ್ಮಾರ್ಟ್ ಸಿಟಿಗೆ ರಾಜ್ಯ ಸರ್ಕಾರ ಅನುದಾನವೇ ಬಿಡುಗಡೆ ಮಾಡಿಲ್ಲ.

ಕೇಂದ್ರದಿಂದಲೂ 15 ಇಲಾಖೆಗಳಿಗೆ ಹಣ ಬಿಡುಗಡೆ ಇಲ್ಲ: ಕೇಂದ್ರ ಸರ್ಕಾರ ಕಳೆದ ವರ್ಷಕ್ಕೆ ಹೋಲಿಸಿದರೆ ಆಗಸ್ಟ್ ವರೆಗೆ ಕೇಂದ್ರ ‌ಪುರಸ್ಕೃತ ಯೋಜನೆಗಳಿಗೆ ಅಲ್ಪ ಅನುದಾನ ಬಿಡುಗಡೆ ಮಾಡಿದೆ. ಈವರೆಗೆ ಕೇವಲ 7.77% ಮಾತ್ರ ಪ್ರಗತಿ ಕಂಡಿದೆ. ಕೇಂದ್ರ ಸರ್ಕಾರ ಆಗಸ್ಟ್ ವರೆಗೆ 15 ಇಲಾಖೆಗಳ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಅನುದಾನವನ್ನೇ ಬಿಡುಗಡೆ ಮಾಡಿಲ್ಲ.‌

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ಸಹಕಾರ ಇಲಾಖೆ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ, ಗೃಹ ಇಲಾಖೆ, ವಸತಿ ಇಲಾಖೆ, ಮೂಲಸೌಕರ್ಯ, ಬಂದರು, ಒಳನಾಡು ಜಲ ಸಾರಿಗೆ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಅಲ್ಪಸಂಖ್ಯಾತ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಜಲಸಂಪನ್ಮೂಲ ಇಲಾಖೆಯ ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಅನುದಾನವನ್ನೇ ಬಿಡಗಡೆ ಮಾಡಿಲ್ಲ.

ಇದನ್ನೂ ಓದಿ: ಇಂದಿನಿಂದ ನಾಲ್ಕು ದಿನಗಳ ಕಾಲ ರೈತ ಜಾತ್ರೆ.. ಧಾರವಾಡ ಕೃಷಿ ಮೇಳ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.