ಬೆಳಗಾವಿ: ಕೋವಿಡ್-19 ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಿಂದ ಇದುವರೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ 10 ವರದಿಗಳು ನೆಗೆಟಿವ್ ಬಂದಿವೆ ಎಂದು ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಇದುವರೆಗೆ 10 ಜನರ ಗಂಟಲು ದ್ರವಗಳ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿತ್ತು. ಈ ಮೊದಲೇ ಐದು ಮಾದರಿಗಳ ವರದಿಗಳು ನೆಗೆಟಿವ್ ಬಂದಿದ್ದವು. ಹೊಸದಾಗಿ ಕಳಿಸಲಾಗಿದ್ದ ಉಳಿದ ಐದು ಮಾದರಿಗಳ ವರದಿ ಇಂದು ಬಂದಿದ್ದು, ಅವು ಕೂಡ ನೆಗೆಟಿವ್ ಬಂದಿವೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನ ಪ್ರಯೋಗಾಲಯದಿಂದ ಬುಧವಾರ ಲಭಿಸಿರುವ ವರದಿ ಪ್ರಕಾರ ಹೊಸದಾಗಿ ಕಳಿಸಲಾಗಿರುವ ಎಲ್ಲಾ ಐದು ಮಾದರಿಗಳ ಫಲಿತಾಂಶ ನೆಗೆಟಿವ್ ಬಂದಿದೆ. ಈ ಮುಂಚೆ ಎರಡು ಮಾದರಿ ಬೆಂಗಳೂರು ಹಾಗೂ ಮೂರು ಮಾದರಿಗಳನ್ನು ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಅವು ಕೂಡ ನೆಗೆಟಿವ್ ಬಂದಿದ್ದವು. ಇದೀಗ ಜಿಲ್ಲೆಯಿಂದ ಕಳಿಸಲಾದ 10 ಮಾದರಿಗಳ ವರದಿ ನೆಗೆಟಿವ್ ಬಂದಿದೆ. ಜನರು ಆತಂಕಕ್ಕೆ ಒಳಗಾಗದೇ ಸರ್ಕಾರದ ಸೂಚನೆ ಮೇರೆಗೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.