ETV Bharat / state

ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ - 10,000 cusecs of water released from Koyna reservoir to Krishna river

ಮಧ್ಯಾಹ್ನ 2 ಗಂಟೆಯಿಂದ ಕೊಯ್ನಾ ಆಡಳಿತ ಮಂಡಳಿ ನೀರು ಬಿಡುಗಡೆ ಮಾಡಿದೆ. ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಭಾರಿ ಮಳೆ ಮುಂದುವರೆದರೆ ಮತ್ತೆ ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ ಎದುರಾಗಲಿದೆ.

ಕೊಯ್ನಾ ಜಲಾಶಯ
ಕೊಯ್ನಾ ಜಲಾಶಯ
author img

By

Published : Sep 12, 2021, 6:55 PM IST

ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಸತಾರಾ ಜಿಲ್ಲೆಯಲ್ಲಿರುವ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 10 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಮಾಡಲಾಗುತ್ತಿದೆ.

ಕೊಯ್ನಾ ಜಲಾಶಯ
ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಮಧ್ಯಾಹ್ನ 2 ಗಂಟೆಯಿಂದ ಕೊಯ್ನಾ ಆಡಳಿತ ಮಂಡಳಿ ನೀರು ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ನೀರಿನಲ್ಲಿ‌ ಏರಿಕೆಯಾಗುವ ಕಾರಣ ಕೃಷ್ಣಾ ನದಿ ತೀರದ ಜನರಿಗೆ ಎಚ್ಚರಿಕೆ ವಹಿಸಲು ಅಧಿಕಾರಿಗಳು ಸೂಚಿಸಿದ್ದಾರೆ‌.

ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಭಾರಿ ಮಳೆ ಮುಂದುವರೆದರೆ ಮತ್ತೆ ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ ಎದುರಾಗಲಿದೆ. 105 ಟಿಎಂಸಿ ಸಾಮರ್ಥ್ಯದ ಕೊಯ್ನಾ ಜಲಾಶಯ 103 ಟಿಎಂಸಿಗಳಷ್ಟು ಭರ್ತಿಯಾಗಿದೆ.

ಸದ್ಯ ಕೊಯ್ನಾ ಜಲಾನಯನ ಪ್ರದೇಶದಲ್ಲಿ 57 ಮಿ.ಮೀಗಳಷ್ಟು ಮಳೆಯಾಗಿದೆ. ಇನ್ನೂ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅದರ ಜೊತೆಗೆ ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲೂ ಮಳೆಯಾಗುತ್ತಿದ್ದು ಕೃಷ್ಣಾ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಾಗಲಿದೆ.

ಇದನ್ನೂ ಓದಿ: ಮದುವೆಗೆ ಇದ್ದಿದ್ದು ಮೂರೇ ದಿನ..: ರಸ್ತೆ ಅಪಘಾತದಲ್ಲಿ ದುರಂತ ಅಂತ್ಯ ಕಂಡ ಮದುಮಗ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.