ಬೆಳಗಾವಿ: ಜಿಲ್ಲೆಯಲ್ಲಿ ಉಂಟಾದ ಅತಿವೃಷ್ಟಿ ಸಮಯದಲ್ಲಿ ಆರೋಗ್ಯ ಸೇವೆಯ ನೆನಪಿಗಾಗಿ ಸರ್ಕಾರಿ ಶಾಲೆಯೊಂದರ ಗೋಡೆಯ ಮೇಲೆ 'ಆರೋಗ್ಯ ಕವಚ 108' ವಾಹನದ ಚಿತ್ರ ಬಿಡಿಸಿ ಜನರಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಕೆಲಸ ಮಾಡಲಾಗಿದೆ.
ಪ್ರವಾಹ ಇಳಿದ ನಂತರ ಶಾಲೆಯ ಶಿಕ್ಷಕರು ಮತ್ತು ಗ್ರಾಮಸ್ಥರ ಸಹಾಯದಿಂದ ಶಾಲೆಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಶಾಲೆಗೆ ಮರು ಜೀವ ನೀಡಿ ವಿದ್ಯಾರ್ಥಿಗಳನ್ನು ಸೆಳೆಯುವಂತೆ ಮಾಡಿದ್ದಾರೆ. ಶಾಲೆಯ ಶಿಕ್ಷಕರ ಈ ಕಾರ್ಯಕ್ಕೆ ಆರೋಗ್ಯ ಇಲಾಖೆ ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.