ಬೆಳಗಾವಿ: ಕೋವಿಡ್-19 ಸೋಂಕು ತಗುಲಿದ್ದ ಒಬ್ಬ ಮಹಿಳೆ ಸೇರಿದಂತೆ ಹನ್ನೊಂದು ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಬಿಮ್ಸ್ ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ ತಿಳಿಸಿದ್ದಾರೆ.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಿಲ್ಲೆಯ ನಗರ ಕ್ಯಾಂಪ್ ಪ್ರದೇಶದ 4 ಜನರು, ರಾಯಬಾಗ ತಾಲೂಕು ಕುಡಚಿಯ 4 ಜನರು ಮತ್ತು ಸಂಕೇಶ್ವರ, ಯಳ್ಳೂರ ಹಾಗೂ ಹಿರೇಬಾಗೇವಾಡಿಯ ತಲಾ ಒಬ್ಬರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಜಿಲ್ಲೆಯ ಕ್ಯಾಂಪ್ ಪ್ರದೇಶದ ಪಿ- 355, ಪಿ-356, ಪಿ-358, ಪಿ-359. ಹಾಗೂ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಪಿ-296, ಪಿ-297, ಪಿ-299, ಪಿ-301, ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಪಿ-293, ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದ ಪಿ-295 ಹಾಗೂ ಹಿರೇಬಾಗೇವಾಡಿ ಗ್ರಾಮದ ಪಿ-193 ಗುಣಮುಖರಾಗಿದ್ದು ಬಿಡುಗಡೆ ಹೊಂದಿದ್ದಾರೆ.
ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 73 ಜನರಲ್ಲಿ ಸೋಂಕು ಪತ್ತೆಯಾಗಿದೆ. 26 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಬ್ಬರು ಮೃತಪಟ್ಟಿರುತ್ತಾರೆ.