ಅಥಣಿ (ಬೆಳಗಾವಿ): ತಾಲೂಕಿನ ಸತ್ತಿ ಗ್ರಾಮದ ಹೊರವಲಯದ ಜಮೀನಿನಲ್ಲಿ ಕಬ್ಬಿನ ನಡುವೆ ಬೆಳೆದಿದ್ದ ಗಾಂಜಾವನ್ನು ಅಬಕಾರಿ ಇಲಾಖೆ ವಶಕ್ಕೆ ಪಡೆದಿದೆ. ಆರೋಪಿ ದೇವಪ್ಪ ಈರಪ್ಪ ರುದ್ರಗೌಡರ ಅವರು ಜಮೀನಿನಲ್ಲಿ ಬೆಳೆದಿದ್ದ 131 ಕೆ.ಜಿ ಹಸಿ ಗಾಂಜಾ ವಶಪಡಿಸಿಕೊಂಡಿದ್ದೇವೆ ಎಂದು ಚಿಕ್ಕೋಡಿ ಅಬಕಾರಿ ಉಪ ಆಯುಕ್ತರು ಕೆ.ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.
ಅಥಣಿ ತಾಲೂಕಿನ ಸತ್ತಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಅಂದಾಜು 5 ರಿಂದ 6 ಲಕ್ಷ ರೂಪಾಯಿ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಹಾಗೂ ಆರೋಪಿಯನ್ನು ಬಂಧಿಸಲಾಗಿದೆ ಮತ್ತು ಉತ್ತರ ಕರ್ನಾಟಕದಲ್ಲಿ ಗಾಂಜಾ ಬೆಳೆದರವರ ವಿರುದ್ಧ ದಾಳಿ ನಡೆಸಲಾಗುತ್ತಿದೆ. ಪೊಲೀಸ್ ಇಲಾಖೆ ಹಾಗೂ ಅಬಕಾರಿ ಇಲಾಖೆಯ ಜಂಟಿ ಕಾರ್ಯಾಚರಣೆಯಲ್ಲಿ ಗಾಂಜಾ ಬೆಳೆ ಹಾಗೂ ಮಾರಾಟ ಜಾಲಗಳನ್ನು ಮಟ್ಟ ಹಾಕುವಲ್ಲಿ ಯಶಸ್ವಿಯಾಗುತ್ತಿದ್ದಾರೆ.
ಅಲ್ಲದೆ ಅಕ್ರಮವಾಗಿ ಮಾರಾಟ ಮಾಡುವವರು ಹಾಗೂ ಬೆಳೆಗಳ ನಡುವ ಗಾಂಜಾ ಬೆಳೆದವರ ಕುರಿತು ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕರಿಗೆ ಚಿಕ್ಕೋಡಿ ಅಬಕಾರಿ ಉಪ ಆಯುಕ್ತ ಕೆ.ಅರುಣ್ ಕುಮಾರ್ ಮನವಿ ಮಾಡಿದ್ದಾರೆ.