ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿಯೂ ಗಾಂಜಾ ಮಾರಾಟ ಹಾಗೂ ಸೇವನೆ ಎಗ್ಗಿಲ್ಲದೆ ನಡೆಯುತ್ತಿದ್ದು, ಕೇವಲ ಒಂದೇ ವಾರದಲ್ಲಿ ಜಿಲ್ಲೆಯಲ್ಲಿ 145 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ.
ಈ ಕುರಿತು ಬೆಳಗಾವಿ ಎಸ್‌ಪಿ ಲಕ್ಷ್ಮಣ್ ನಿಂಬರಗಿ ಮಾಹಿತಿ ನೀಡಿದ್ದು, 2 ಲಕ್ಷದ 25 ಸಾವಿರ ರೂಪಾಯಿ ಮೌಲ್ಯದ 145 ಕೆಜಿ ಗಾಂಜಾ ಜಪ್ತಿ ಮಾಡಿಕೊಳ್ಳಲಾಗಿದೆ. ಬೆಳಗಾವಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ 6 ಕೇಸ್ ದಾಖಲಾಗಿವೆ. ಪ್ರಕರಣ ಸಂಬಂಧ ಒಟ್ಟು 14 ಆರೋಪಿಗಳನ್ನು ಬಂಧಿಸಲಾಗಿದೆ ಎಂದಿದ್ದಾರೆ.
ಮಾದಕ ವಸ್ತು ವಹಿವಾಟು ನಡೆಸುವವರ ವಿರುದ್ಧ ಕಾರ್ಯಾಚರಣೆ ನಿರಂತರವಾಗಿ ಮುಂದುವರೆಸಲಾಗುವುದು. ಸಾರ್ವಜನಿಕರಿಗೆ ಗಾಂಜಾ ಮಾರಾಟ ಬಗ್ಗೆ ಯಾವುದಾದರೂ ಮಾಹಿತಿ ಇದ್ದರೆ ಪೊಲೀಸ್ ಇಲಾಖೆಗೆ ತಿಳಿಸಬೇಕು. ಮಕ್ಕಳ ಬಗ್ಗೆಯೂ ನಿಗಾ ಇಡುವಂತೆ ಪೋಷಕರಲ್ಲಿ ಎಸ್‌ಪಿ ಲಕ್ಷ್ಮಣ್ ನಿಂಬರಗಿ ಮನವಿ ಮಾಡಿದ್ದಾರೆ.