ಬೆಳಗಾವಿ: ಕೋವಿಡ್ ವಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದ 23 ವರ್ಷದ ವೈದ್ಯೆ ಸೇರಿ ಜಿಲ್ಲೆಯಲ್ಲಿಂದು 15 ಜನರಿಗೆ ಕೊರೊನಾ ವಕ್ಕರಿಸಿದೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 465ಕ್ಕೆ ಏರಿಕೆಯಾಗಿದೆ. ಕೋವಿಡ್ ವಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದ 23 ವರ್ಷದ ವೈದ್ಯೆಗೂ ಸೋಂಕು ದೃಢಪಟ್ಟಿದೆ. ಬೆಳಗಾವಿ ತಾಲೂಕಿನಲ್ಲಿ 6, ಬೈಲಹೊಂಗಲ 2, ಹುಕ್ಕೇರಿ, ರಾಮದುರ್ಗ ತಾಲೂಕಿನಲ್ಲಿ ತಲಾ ಒಂದು ಪ್ರಕರಣ, ಚಿಕ್ಕೋಡಿ 3, ಅಥಣಿಯಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ.
ಈವರೆಗೆ 342 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 116 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, ಕೋವಿಡ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.