ಬೆಳಗಾವಿ : ಮಹಾರಾಷ್ಟ್ರದಲ್ಲಿ ಮತ್ತೆ ವರುಣನ ಅಬ್ಬರ ಆರಂಭವಾಗಿದ್ದು, ಗಡಿ ಜಿಲ್ಲೆಯಲ್ಲಿ ಪ್ರವಾಹದ ಭೀತಿ ಎದುರಾಗಿದ್ದು ಜನರು ಆತಂಕದಲ್ಲೇ ಕಾಲ ಕಳೆಯುವಂತಾಗಿದೆ.
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮಲಪ್ರಭಾ ನದಿಗೆ 5 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಹೀಗಾಗಿ ರಾಮದುರ್ಗ ಮತ್ತು ಸುರೇಬಾನ್ ಸಂಪರ್ಕ ಸೇತುವೆ ಜಲಾವೃತಗೊಂಡಿದ್ದು ರಸ್ತೆ ಸಂಪರ್ಕ ಕಡಿತಗೊಂಡಿದೆ. ಇದರಿಂದಾಗಿ ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ರಾಮದುರ್ಗ ತಹಶೀಲ್ದಾರ್ ಬಸವರಾಜ ಮನವಿ ಮಾಡಿಕೊಂಡರು.
ಕೃಷ್ಣೆಗೆ ನಾಳೆ 2 ಲಕ್ಷ ಕ್ಯೂಸೆಕ್ ನೀರು
ಕೊಯ್ನಾ ಜಲಾಶಯ ಮೂಲಕ ನಾಳೆ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಆಗಲಿದ್ದು, ಕೃಷ್ಣಾ ನದಿಪಾತ್ರದ ಜನರು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳುವಂತೆ ಬೆಳಗಾವಿ ಎಸ್ಪಿ ಲಕ್ಷ್ಮಣ ನಿಂಬರಗಿ ಮನವಿ ಮಾಡಿದ್ದಾರೆ.