ಬೆಳಗಾವಿ: ಜಿಲ್ಲೆಯಲ್ಲಿ ಇಂದು 22 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದರೂ, ಅಧಿಕಾರಿಗಳ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ ಎಂದು ಜಿಲ್ಲಾಧಿಕಾರಿ ಎಸ್. ಬಿ. ಬೊಮ್ಮನಹಳ್ಳಿ ಹೇಳಿದರು.
ಜಿಲ್ಲಾಡಳಿತದ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ: ಡಿಸಿ ಬೊಮ್ಮನಹಳ್ಳಿ
ಬೆಳಗಾವಿ ಜಿಲ್ಲೆಯಲ್ಲಿ ಇಂದು 22 ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 107ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಎಸ್. ಬಿ. ಬೊಮ್ಮನಹಳ್ಳಿ ಸ್ಪಷ್ಟಪಡಿಸಿದರು.
ಜಿಲ್ಲಾಧಿಕಾರಿ ಎಸ್. ಬಿ. ಬೊಮ್ಮನಹಳ್ಳಿ
ಬೆಳಗಾವಿ: ಜಿಲ್ಲೆಯಲ್ಲಿ ಇಂದು 22 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದರೂ, ಅಧಿಕಾರಿಗಳ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ ಎಂದು ಜಿಲ್ಲಾಧಿಕಾರಿ ಎಸ್. ಬಿ. ಬೊಮ್ಮನಹಳ್ಳಿ ಹೇಳಿದರು.
ಇಂದು ಪಾಸಿಟಿವ್ ವರದಿ ಬಂದಿರುವ 22 ಜನರು ರಾಜಸ್ಥಾನದ ಅಜ್ಮೀರಕ್ಕೆ ತೆರಳಿದ್ದರು. ಇದಕ್ಕೆ ಸಂಬಂಧಿಸಿದಂತೆ ಮೇ 2ರಂದು ಗುಜರಾತ್ ಡೆಪ್ಯೂಟಿ ಕಮಿಷನರ್ ಒಬ್ಬರು ಕೊಟ್ಟಿರುವ ಪಾಸ್ ಮೇಲೆ ಖಾಸಗಿ ಬಸ್ ಮೂಲಕ 38 ಜನರು ಆಗಮಿಸಿದ್ದರು. ಇವರನ್ನು ಜಿಲ್ಲೆಯ ಗಡಿಯಲ್ಲಿರುವ ಚೆಕ್ ಪೋಸ್ಟ್ನಲ್ಲಿ ತಡೆದು ವಾಪಸ್ ಕಳುಹಿಸಲಾಗಿತ್ತು. ಆದರೂ ಪುನಃ ಅನ್ಯ ಮಾರ್ಗದ ಮೂಲಕ ಜಿಲ್ಲೆಗೆ ಪ್ರವೇಶ ಮಾಡಿದ್ದರು. ಹೀಗಾಗಿ 38 ಜನರಿದ್ದ ಖಾಸಗಿ ಬಸ್ ಸೀಜ್ ಮಾಡಿ ಎಲ್ಲರನ್ನೂ ನಿಪ್ಪಾಣಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಆ ಪೈಕಿ 30 ಜನರ ವರದಿ ಪಾಸಿಟಿವ್ ಬಂದಿದ್ದು, ಅದರಲ್ಲಿ 8 ಜನರು ಬಾಗಲಕೋಟೆ ಜಿಲ್ಲೆಗೆ ಸೇರಿದವರಾಗಿದ್ದಾರೆ. ಇನ್ನುಳಿದ 8 ಜನರ ವರದಿ ನೆಗೆಟಿವ್ ವರದಿ ಬಂದಿದೆ ಎಂದರು.
ಇನ್ನು ನಮ್ಮ ಅಧಿಕಾರಿಗಳ ಮುಂಜಾಗ್ರತಾ ಕ್ರಮದಿಂದ ಮುಂದಾಗಬಹುದಾದ ದೊಡ್ಡ ಅನಾಹುತ ತಪ್ಪಿದೆ. ಜಿಲ್ಲಾಡಳಿತದ ಕಣ್ಣು ತಪ್ಪಿಸಿ ಒಳ ನುಸುಳಿದ 38 ಜನರ ಮೇಲೂ ಪ್ರಕರಣ ದಾಖಲಿಸಲಾಗುವುದು ಎಂದು ಅವರು ತಿಳಿಸಿದರು.

Last Updated : May 10, 2020, 4:45 PM IST