ಬೆಳಗಾವಿ: ಜಿಲ್ಲೆಯಲ್ಲಿ ಇಂದು ಹೊಸದಾಗಿ 289 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಐವರು ಬಲಿಯಾಗಿದ್ದಾರೆ.
ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ ಕುಂದಾನಗರಿಯಲ್ಲಿ 289 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10,835ಕ್ಕೆ ಏರಿಕೆಯಾಗಿದೆ.
ಇಂದು 170 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ಮೂಲಕ 6309 ಜನರು ಗುಣಮುಖರಾದಂತಾಗಿದೆ.
ಇನ್ನು ಜಿಲ್ಲೆಯಲ್ಲಿ 4,358 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.