ETV Bharat / state

ರಾಜ್ಯದಲ್ಲಿ 34,115 ಕೋಟಿ ಹೂಡಿಕೆಗೆ ಅನುಮೋದನೆ: 13,308 ಉದ್ಯೋಗ ಸೃಷ್ಟಿ ನಿರೀಕ್ಷೆ - ಉದ್ಯೋಗ ಸೃಷ್ಟಿ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿ ಸಭೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಿತು.

Minister MB Patil spoke to the media.
ಸಚಿವ ಎಂ.ಬಿ.ಪಾಟೀಲ ಮಾಧ್ಯಮದವರೊಂದಿಗೆ ಮಾತನಾಡಿದರು.
author img

By ETV Bharat Karnataka Team

Published : Dec 12, 2023, 11:04 PM IST

ಬೆಳಗಾವಿ:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ, ಒಟ್ಟು 34,115 ಕೋಟಿ ರೂ ಮೊತ್ತದ ಬಂಡವಾಳ ಹೂಡಿಕೆ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು.

ಸಿಎಂ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆದ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ, ಹೆಚ್ಚುವರಿ ರೂ 13,911 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್‌ಕಾನ್‌ ಕಂಪನಿ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ತಿಳಿಸಿದರು.

ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಫಾಕ್ಸ್‌ಕಾನ್‌ ಈಗಾಗಲೇ ರಾಜ್ಯದಲ್ಲಿ ರೂ 8,000 ಕೋಟಿ ಬಂಡವಾಳ ಹೂಡಿಕೆ ಮಾಡಲು ಅನುಮೋದನೆ ಪಡೆದಿದೆ. ಜೆಎಸ್‌ಡಬ್ಲ್ಯು ರಿನ್ಯೂ ಎನರ್ಜಿ ಫೋರ್ ಲಿಮಿಟೆಡ್ (ರೂ 4,960 ಕೋಟಿ ), ಜೆಎಸ್‌ಡಬ್ಲ್ಯು ಸ್ಟೀಲ್ ಲಿಮಿಟೆಡ್ (ರೂ 3,804 ಕೋಟಿ ),

ಟೊಯೊಟಾ ಕಿರ್ಲೋಸ್ಕರ್ ಮೋಟರ್ ಪ್ರೈವೇಟ್ ಲಿಮಿಟೆಡ್ (ರೂ 3237.30 ಕೋಟಿ ), ಟಿಆರ್‌ಐಎಲ್‌ ಬೆಂಗಳೂರು ರಿಯಲ್ ಎಸ್ಟೇಟ್ ಸಿಕ್ಸ್ ಲಿಮಿಟೆಡ್ (ರೂ 3273 ಕೋಟಿ ಹೂಡಿಕೆ), ಜಾನಕಿ ಕಾರ್ಪ್‌ ಲಿಮಿಟೆಡ್‌ (ರೂ 607 ಕೋಟಿ ಮೊತ್ತದ ಹೆಚ್ಚುವರಿ ಹೂಡಿಕೆ) ಪ್ರಸ್ತಾವನೆಗಳು ’ಎಸ್‌ಎಚ್‌ಎಲ್‌ಸಿಸಿ’ ಅನುಮೋದನೆ ಪಡೆದಿರುವ ದೊಡ್ಡ ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಲ್ಲಿ ಸೇರಿವೆ. ಇದರಿಂದ 13,308 ಜನರಿಗೆ ಉದ್ಯೋಗ ದೊರಕುವ ನಿರೀಕ್ಷೆ ಇದೆ ಎಂದು ಸಚಿವರು ಮಾಹಿತಿ ನೀಡಿದರು.

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 4 ಬಂಡವಾಳ ಹೂಡಿಕೆ ಕಂಪನಿ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳಿಂದ ಒಟ್ಟು ರೂ 9,461 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ. ಅವುಗಳಿಂದ ಈ ಪ್ರದೇಶದಲ್ಲಿ 3538 ಜನರಿಗೆ ಉದ್ಯೋಗ ಅವಕಾಶಗಳು ದೊರಕಲಿವೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸಲು ಸರ್ಕಾರದ ಕಡೆಯಿಂದ ನಡೆಯುತ್ತಿರುವ ಇಂಥ ಸಂಘಟಿತ ಪ್ರಯತ್ನಗಳು ಬೆಂಗಳೂರಿನ ಆಚೆ ಉಪಕ್ರಮದ ಭಾಗವಾಗಿವೆ ಎಂದು ಸಚಿವ ಎಂ.ಬಿ.ಪಾಟೀಲ ಮಾಹಿತಿ ನೀಡಿದರು.

ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್‌ , ಸಚಿವ ಚೆಲುವರಾಯಸ್ವಾಮಿ, ಪ್ರಿಯಾಂಕ್‌ ಖರ್ಗೆ, ನಾಗೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಡಾ. ಶಾಲಿನಿ ರಜನೀಶ್‌, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂಓದಿ:ಮೈಸೂರು ಕಾಗದ ಕಾರ್ಖಾನೆ ಪುನಾರಂಭಕ್ಕೆ ಸರ್ಕಾರ ಚಿಂತನೆ ನಡೆಸಿದೆ: ಸಚಿವ ಎಂ ಬಿ ಪಾಟೀಲ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.