ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ 8 ಸಾವಿರದ ಗಡಿ ದಾಟಿದೆ. ಜಿಲ್ಲೆಯಲ್ಲಿ ಇವತ್ತು 395 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 8,360ಕ್ಕೆ ಏರಿಕೆಯಾಗಿದೆ. ಇನ್ನು ಕೊರೊನಾಗೆ ಈ ದಿನ 7 ಜನರು ಬಲಿಯಾಗಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 137ಕ್ಕೆ ಏರಿಕೆಯಾಗಿದೆ. ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 459 ಸೋಂಕಿತರು ಇಂದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ ಸದ್ಯ 3,608 ಆ್ಯಕ್ಟಿವ್ ಪ್ರಕರಣಗಳಿವೆ.