ಬೆಳಗಾವಿ: ಮಹಾರಾಷ್ಟ್ರದಿಂದ ಮರಳಿದ್ದ 61 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 302ಕ್ಕೆ ಏರಿಕೆಯಾಗಿದೆ. ಇನ್ನೊಂದೆಡೆ 38 ಮಂದಿ ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಥಣಿ, ಹುಕ್ಕೇರಿ, ರಾಯಬಾಗ ಹಾಗೂ ಸವದತ್ತಿ ತಾಲೂಕಿನ 37 ಜನರು ಹಾಗೂ ಬಾಗಲಕೋಟೆಯ ಒಬ್ಬರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.