ಬೆಳಗಾವಿ : ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮುಂದುವರೆದಿದ್ದು, ಇಂದು 384 ಜನರಿಗೆ ಸೋಂಕು ತಗುಲಿದೆ.
ಇಂದು ಪತ್ತೆಯಾದ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 9481ಕ್ಕೆ ಏರಿಕೆಯಾಗಿದೆ. ಸೋಂಕಿಗೆ ಏಳು ಮಂದಿ ಬಲಿಯಾಗಿದ್ದು, ಒಟ್ಟು 151 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿಂದು ಸುಮಾರು 192 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ 5163 ಜನರು ಗುಣಮುಖರಾದಂತಾಗಿದೆ.