ETV Bharat / state

ಮಗ ಮಾಡಿದ್ದ 700 ರೂಪಾಯಿ ಸಾಲಕ್ಕೆ ತಂದೆ ಕೊಲೆ: ಅಪರಾಧಿಗಳಿಗೆ 9 ವರ್ಷ ಜೈಲು ಸಜೆ

ಸಾಲದ ವಿಚಾರವಾಗಿ ನಡೆದ ಜಗಳದಲ್ಲಿ ನಾಲ್ವರು ಸೇರಿ ವ್ಯಕ್ತಿಯನ್ನು ಕೊಲೆಗೈದ ಪ್ರಕರಣ ಸಂಬಂಧ ಗೋಕಾಕಿನ 12ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅಪರಾಧಿಗಳಿಗೆ ಜೈಲು ಶಿಕ್ಷೆ ವಿಧಿಸಿದೆ.

9 years in jail
9 years in jail
author img

By ETV Bharat Karnataka Team

Published : Dec 22, 2023, 10:52 PM IST

ಬೆಳಗಾವಿ: ಮಗ ಮಾಡಿದ್ದ 700 ರೂಪಾಯಿ ಸಾಲದ ವಿಚಾರಕ್ಕೆ ನಡೆದ ಜಗಳದಲ್ಲಿ ತಂದೆಯನ್ನು ಕೊಂದಿದ್ದ ನಾಲ್ವರು ಅಪರಾಧಿಗಳಿಗೆ ಗೋಕಾಕಿನ 12ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಗೋಕಾಕ ತಾಲೂಕಿನ ಮರಡಿಮಠ ಗ್ರಾಮದಲ್ಲಿ ಕಳೆದ ವರ್ಷದ ಮಾರ್ಚ್ ತಿಂಗಳಲ್ಲಿ ಕೊಲೆ ಪ್ರಕರಣ ನಡೆದಿತ್ತು. ಸಾಲದ ವಿಚಾರಕ್ಕೆ ಶುರುವಾಗಿದ್ದ ಜಗಳ ಕೊಲೆಯಲ್ಲಿ ಅಂತ್ಯವಾಗಿತ್ತು.

ಮಾನಿಂಗ್ ಗಾಯಕವಾಡ (41) ಕೊಲೆಯಾಗಿದ್ದ ವ್ಯಕ್ತಿ. ಇವರ ಮಗ ಹನುಮಂತ ಗಾಯಕವಾಡ ಪಕ್ಕದ ಮನೆಯ ರಾಜು ಶಂಕರ್ ಭಜಂತ್ರಿ ಬಳಿ 700 ರೂ ಸಾಲ ಪಡೆದುಕೊಂಡಿದ್ದ. ಬಳಿಕ ಮರಳಿಸುವ ವಿಚಾರದಲ್ಲಿ ಎರಡೂ ಕುಟುಂಬಗಳ ನಡುವೆ ಜಗಳ ಏರ್ಪಟ್ಟಿತ್ತು. ಈ ಜಗಳ ವಿಕೋಪಕ್ಕೆ ತಿರುಗಿ ಗಲಾಟೆಯಲ್ಲಿ ಮಾನಿಂಗ ಕೊಲೆಯಾಗಿದ್ದರು.

ಕೊಲೆ ಪ್ರಕರಣ ತನಿಖೆಯಲ್ಲಿ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗಳಾದ ರಾಜು ಶಂಕರ್ ಭಜಂತ್ರಿ, ಗೀತಾ ರಾಜು ಭಜಂತ್ರಿ ಸೇರಿ ನಾಲ್ವರಿಗೆ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ. ಐಪಿಸಿ ಸೆಕ್ಷನ್ 304ರ ಪ್ರಕಾರ 9 ವರ್ಷ ಜೈಲು ಹಾಗೂ 50 ಸಾವಿರ ದಂಡ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಸರ್ಕಾರದ ಪರ ಅಭಿಯೋಜಕ ಸುನೀಲ ಹಂಜಿ ವಕಾಲತ್ತು ವಹಿಸಿದ್ದರು.

ಇದನ್ನೂ ಓದಿ: ಹೈಕೋರ್ಟ್​ಗೆ ಚಳಿಗಾಲದ ರಜೆ: ರಜಾಕಾಲೀನ ಪೀಠಗಳಿಂದ ತುರ್ತು ಅರ್ಜಿಗಳ ವಿಚಾರಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.