ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ಉಂಟಾದ ಅತಿವೃಷ್ಟಿ ನಿರ್ವಹಿಸಲು ಕೇಂದ್ರ ಸರ್ಕಾರ ರಾಜ್ಯಕ್ಕೆ 400 ಕೋಟಿ ಹಣ ಮಂಜೂರು ಮಾಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ ನೀಡಿದರು.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹ ನಿರ್ವಹಣೆಗೆ ಹಣ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ರಾಜ್ಯದಿಂದ ಪ್ರಸ್ತಾವನೆ ಕಳಿಸಲಾಗಿತ್ತು. ನಮ್ಮ ಮನವಿಗೆ ಕೇಂದ್ರ ಸ್ಪಂದಿಸಿದೆ. ಪ್ರವಾಹ ಪರಿಸ್ಥಿತಿ ನಿಭಾಯಿಸಲು ಮುಂಗಡವಾಗಿ ಕೇಂದ್ರ ಸರ್ಕಾರ 400 ಕೋಟಿ ರೂ. ಬಿಡುಗಡೆ ಮಾಡಿದೆ ಎಂದರು.
ಉತ್ತರ ಕರ್ನಾಟಕದಲ್ಲಿ ಪ್ರವಾಹ ಹಾನಿ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ಸಮೀಕ್ಷೆ ಬಳಿಕ ವರದಿ ಸಿದ್ಧಪಡಿಸಿ ಕೇಂದ್ರಕ್ಕೆ ಕಳುಹಿಸಲಾಗುವುದು ಎಂದರು.