ಬೆಳಗಾವಿ: ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟಲು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಸಂಚರಿಸುತ್ತಿದ್ದ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನರಿಗೆ ಮಹಾನಗರ ಪಾಲಿಕೆ ದಂಡ ವಿಧಿಸುತ್ತಿದ್ದು, ಇಲ್ಲಿಯವರೆಗೆ 43,400 ರೂಪಾಯಿ ದಂಡ ಸಂಗ್ರಹವಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್. ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ಲಾಕ್ ಡೌನ್-3 ರ ಸಂದರ್ಭದಲ್ಲಿ ಕಿತ್ತಳೆ ವಲಯದಲ್ಲಿರುವ ಬೆಳಗಾವಿ ಜಿಲ್ಲೆಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಕೆಲವು ಆರ್ಥಿಕ ಚಟುವಟಿಕೆಗಳಿಗೆ ಮತ್ತು ಜನಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ವೇಳೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದು, ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗಿದೆ.
ಜಿಲ್ಲೆಯಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಲಿಸಲಾಗಿದ್ದು, ನಿಯಮ ಉಲ್ಲಂಘನೆ ಕಂಡು ಬಂದಲ್ಲಿ ಸ್ಥಳದಲ್ಲಿಯೇ ದಂಡ ವಿಧಿಸಲಾಗುತ್ತಿದೆ.