ಬೆಳಗಾವಿ: ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು 454 ಜನರಿಗೆ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 13470 ಕ್ಕೆ ಏರಿಕೆಯಾಗಿದೆ.
ಬೆಳಗಾವಿ ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 245 ಸೋಂಕಿತರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ 9388 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಜಿಲ್ಲೆಯಲ್ಲಿ ಸದ್ಯ 3885 ಸಕ್ರೀಯ ಪ್ರಕರಣಗಳಿವೆ. ಕಿಲ್ಲರ್ ಕೊರೊನಾಗೆ ಬೆಳಗಾವಿಯಲ್ಲಿ ಈವರೆಗೆ 197 ಜನ ಬಲಿಯಾಗಿದ್ದಾರೆ.