ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೇರಿ ಚೆಕ್‌ಪೋಸ್ಟ್ ಬಳಿ ಸೋಮವಾರ ರಾತ್ರಿ ಕಾರಿನಲ್ಲಿ ಸಾಗಿಸಲಾಗುತ್ತಿದ್ದ 6 ಲಕ್ಷ ರೂಪಾಯಿ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಚುನಾವಣಾ ಕರ್ತವ್ಯನಿರತ ಎಸ್ಎಸ್ಟಿ ತಂಡವು ಸುರಪುರ ತಾಲೂಕಿನ ಕೆಂಭಾವಿ ಗ್ರಾಮದ ವ್ಯಕ್ತಿಯೊಬ್ಬರಿಂದ ಈ ನಗದು ಜಪ್ತಿ ಮಾಡಿದೆ.
ಹಣದ ಮೂಲ ಹಾಗೂ ಸಾಗಣಿಕೆ ಕುರಿತು ಮಾಹಿತಿ ಪಡೆದುಕೊಂಡು ಜಿಲ್ಲಾ ಪಂಚಾಯತ್ ಸಿಇಒ ಅಧ್ಯಕ್ಷತೆಯ ನಗದು ಜಪ್ತಿ ಮತ್ತು ಪರಿಹಾರ ಸಮಿತಿಗೆ ಪ್ರಕರಣವನ್ನು ವರ್ಗಾಯಿಸಲಾಗಿದೆ.
ಇದನ್ನೂ ಓದಿ: ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತೆ: ಡಿಸಿಎಂ ಗೋವಿಂದ ಕಾರಜೋಳ