ಬೆಳಗಾವಿ: ಜಿಲ್ಲೆಯಲ್ಲಿ ಇಂದು ಕೊರೊನಾಗೆ ಆರು ಜನ ಬಲಿಯಾಗಿದ್ದಾರೆ. ಈ ಮೂಲಕ ಸೋಂಕಿಗೆ ಬಲಿಯಾದವರ ಸಂಖ್ಯೆ 46ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು ಹೊಸದಾಗಿ 163 ಜನರಿಗೆ ಕೊರೊನಾ ಸೋಂಕು ವಕ್ಕರಿಸಿದ್ದು, ಎಲ್ಲರನ್ನೂ ಕೋವಿಡ್ ವಾರ್ಡ್ ಹಾಗೂ ಕೋವಿಡ್ ಸೆಂಟರ್ಗೆ ಶಿಫ್ಟ್ ಮಾಡಲಾಗಿದೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2149ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಕೋವಿಡ್ ವಾರ್ಡ್ ಹಾಗೂ ಕೋವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 173 ಸೋಂಕಿತರು ಗುಣಮುಖರಾಗಿ ಏಕಕಾಲಕ್ಕೆ ಡಿಸ್ಚಾರ್ಜ್ ಆಗಿದ್ದಾರೆ.