ETV Bharat / state

ಬೆಳಗಾವಿ ನಗರ ಪೊಲೀಸ್ ವ್ಯಾಪ್ತಿಯಲ್ಲಿ 72 ಜನ ಪೊಲೀಸರಿಗೆ ಸೋಂಕು !

ಪೊಲೀಸರು ತೆಗೆದುಕೊಳ್ಳುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆಯೂ ನಮ್ಮ ಅಧಿಕಾರಿಗಳು ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇದರ ಜೊತೆಗೆ ಅವರಿಗೆ ಬೇಕಾದ ಮಾಸ್ಕ್, ಸ್ಯಾನಿಟೈಸರ್, ಗ್ಲೌಸ್ ಸೇರಿ ಇನ್ನಿತರ ವಸ್ತುಗಳನ್ನು ಪೂರೈಸಿದ್ದೇವೆ. ತನಿಖೆ ಯಾವ ರೀತಿ ಮಾಡಬೇಕು, ಯಾವ ರೀತಿ ಬಂಧಿಸಬೇಕು, ಗಾಡಿ ಸೀಜ್ ಸೇರಿ ಇನ್ನಿತರ ಸಂದರ್ಭದಲ್ಲಿ ಯಾವ ರೀತಿ ಕ್ರಮ ಕೈಗೊಳ್ಳಬೇಕು..

vikram
vikram
author img

By

Published : May 25, 2021, 5:56 PM IST

ಬೆಳಗಾವಿ : ನಗರ ಪೊಲೀಸ್ ವ್ಯಾಪ್ತಿಯಲ್ಲಿ 72 ಜನ ಪೊಲೀಸರು ಹಾಗೂ ಇಬ್ಬರು ಹೋಮ್ ಗಾರ್ಡ್​ಗಳಿಗೆ ಕೊರೊನಾ ಸೋಂಕು ತಗುಲಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಡಿಸಿಪಿ ಡಾ.ವಿಕ್ರಮ್ ಆಮಟೆ ಹೇಳಿದರು.

ನಗರದ ಕಮಿಷನರ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಗರ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವ್ಯಾಕ್ಸಿನೇಶನ್ ಆಗಿರುವುದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಆದರೆ, 72 ಜನ ಪೊಲೀಸರು ಹಾಗೂ ಹೋಮ್ ಗಾರ್ಡ್‌ಗಳಿಗೆ ಕೊರೊನಾ ಸೋಂಕು ಕಾಣಿಸಿದೆ. ಇದರಲ್ಲಿ 30 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ‌. 27 ಜನರು ಕರ್ತವ್ಯಕ್ಕೆ ಮರಳಿದ್ದಾರೆ‌.

40ಜನರು ಹೋಮ್ ಐಸೋಲೇಶನ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಬೇಕಾದ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಈವರೆಗೆ 1400 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವ್ಯಾಕ್ಸಿನ್ ತೆಗೆದುಕೊಂಡಿದ್ದಾರೆ. ಇನ್ನು‌, 90 ಜನರು ಸೆಕೆಂಡ್ ಡೋಸ್ ತೆಗೆದುಕೊಳ್ಳಬೇಕಿದೆ. ಸುಮಾರು 45 ಜನರು ವಿವಿಧ ಆರೋಗ್ಯ ಸಮಸ್ಯೆಯಿಂದ ವ್ಯಾಕ್ಸಿನ್ ತೆಗೆದುಕೊಂಡಿಲ್ಲ.

ಶೇ.98ರಷ್ಟು ನಮ್ಮ ಪೊಲೀಸರು ವ್ಯಾಕ್ಸಿನ್ ತೆಗೆದುಕೊಂಡಿದ್ದಾರೆ ಎಂದು ಡಿಸಿಪಿ ಆಮಟೆ ಸ್ಪಷ್ಟಪಡಿಸಿದರು. ಲಾಕ್‍ಡೌನ್ ಸೇರಿ ಸರ್ಕಾರದ ಆದೇಶವನ್ನು ಜಾರಿಗೊಳಿಸುವುದು ಪೊಲೀಸರು ಕರ್ತವ್ಯವಾಗಿದೆ. ಹೀಗಾಗಿ, ಬೆಳಗ್ಗೆ, ಮಧ್ಯಾಹ್ನ, ರಾತ್ರಿ ಎಂದು ಶಿಫ್ಟ್ ಮಾಡಿದ್ದೇವೆ.

ಪೊಲೀಸರು ತೆಗೆದುಕೊಳ್ಳುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆಯೂ ನಮ್ಮ ಅಧಿಕಾರಿಗಳು ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇದರ ಜೊತೆಗೆ ಅವರಿಗೆ ಬೇಕಾದ ಮಾಸ್ಕ್, ಸ್ಯಾನಿಟೈಸರ್, ಗ್ಲೌಸ್ ಸೇರಿ ಇನ್ನಿತರ ವಸ್ತುಗಳನ್ನು ಪೂರೈಸಿದ್ದೇವೆ.

ತನಿಖೆ ಯಾವ ರೀತಿ ಮಾಡಬೇಕು, ಯಾವ ರೀತಿ ಬಂಧಿಸಬೇಕು, ಗಾಡಿ ಸೀಜ್ ಸೇರಿ ಇನ್ನಿತರ ಸಂದರ್ಭದಲ್ಲಿ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬುದನ್ನು ತಿಳಿಸಲಾಗಿದೆ.

ಕಡ್ಡಾಯವಾಗಿ ಎಲ್ಲರೂ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ವ್ಯಾಕ್ಸಿನ್ ತೆಗೆದುಕೊಂಡಿದ್ದೇವೆ ಎಂದು ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ. ಅದೇ ರೀತಿ ನಾವು ಕೂಡ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.