ETV Bharat / state

ಪ್ಯಾರಿಸ್ ಒಲಿಂಪಿಕ್ಸ್​ಗೆ 'ಅಮೃತ ಕ್ರೀಡಾ ದತ್ತು ಯೋಜನೆ'ಯಡಿ ರಾಜ್ಯದ 75 ಕ್ರೀಡಾಪಟುಗಳ ಆಯ್ಕೆ: ಸಚಿವ ಬಿ.ನಾಗೇಂದ್ರ - ​ ETV Bharat Karnataka

2021-22ನೇ ಸಾಲಿನಿಂದ ಪ್ಯಾರಿಸ್‌ ಒಲಿಂಪಿಕ್ಸ್​ನಲ್ಲಿ ಭಾಗವಹಿಸಲು ಸಹಾಯವಾಗುವಂತೆ ರಾಜ್ಯದ ಕ್ರೀಡಾಪಟುಗಳಿಗೆ ಅಮೃತ ಕ್ರೀಡಾ ದತ್ತು ಯೋಜನೆ ಅನುಷ್ಠಾನಗೊಳಿಸಲಾಗಿದೆ.

ವಿಧಾನ ಪರಿಷತ್‌
ವಿಧಾನ ಪರಿಷತ್‌
author img

By ETV Bharat Karnataka Team

Published : Dec 8, 2023, 5:24 PM IST

ಬೆಂಗಳೂರು: ಮುಂದಿನ ವರ್ಷ ಪ್ಯಾರಿಸ್​ನಲ್ಲಿ ನಡೆಯಲಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕ ಗೆಲ್ಲುವ ಸಾಮರ್ಥ್ಯವುಳ್ಳ ಪ್ಯಾರಾ ಕ್ರೀಡಾಪಟುಗಳನ್ನೊಳಗೊಂಡಂತೆ 75 ಕ್ರೀಡಾಪಟುಗಳನ್ನು ರಾಜ್ಯದಲ್ಲಿ ಅಮೃತ ಕ್ರೀಡಾ ದತ್ತು ಯೋಜನೆಯಡಿ ಆಯ್ಕೆ ಮಾಡಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ತಿಳಿಸಿದರು.

ವಿಧಾನ ಪರಿಷತ್‌ ಪ್ರಶ್ನೋತ್ತರ ಕಲಾಪದಲ್ಲಿ ಇಂದು ಬಿಜೆಪಿ ಸದಸ್ಯ ಎಸ್.ರುದ್ರೇಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ಯಾರಿಸ್‌ ಒಲಿಂಪಿಕ್ಸ್​ನಲ್ಲಿ ಭಾಗವಹಿಸಲು ಸಹಾಯವಾಗುವಂತೆ ರಾಜ್ಯದ ಕ್ರೀಡಾಪಟುಗಳಿಗೆ 2021-22ನೇ ಸಾಲಿನಿಂದ ಅಮೃತ ಕ್ರೀಡಾ ದತ್ತು ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ಒಲಿಂಪಿಕ್ಸ್ ಸೇರಿದಂತೆ ಅಂತರರಾಷ್ಟಿಯ ಮಟ್ಟದಲ್ಲಿ ಸಾಧನೆ ಮಾಡುವ ಸಾಮರ್ಥ್ಯ ಹೊಂದಿರುವ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ, ಪೋಷಿಸಿ, ಸಾಧನೆಗೆ ಅಗತ್ಯವಾದ ಬೆಂಬಲ ವ್ಯವಸ್ಥೆ ನೀಡುವುದು ಈ ಯೋಜನೆಯ ಗುರಿ. ಈ ಯೋಜನೆಯ ಫಲಾನುಭವಿಗಳಿಗೆ ತರಬೇತಿಗಾಗಿ, ಕ್ರೀಡಾ ವಿಜ್ಞಾನದ ಬೆಂಬಲ, ಪೌಷ್ಟಿಕ ಆಹಾರ, ತರಬೇತಿಗೆ ಅಗತ್ಯವಿರುವ ಕ್ರೀಡಾ ಕಿಟ್ ಖರೀದಿಸಲು, ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಲು, ದೈನಂದಿನ ಅಗತ್ಯಗಾಗಿ ಮತ್ತು ಇತರೆ ವೆಚ್ಚಗಳಿಗಾಗಿ ತಲಾ ರೂ 10 ಲಕ್ಷ ವಾರ್ಷಿಕ ಗರಿಷ್ಠ ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಜಲಜೀವನ್ ಮಿಷನ್‌ನಡಿ 46.98 ಲಕ್ಷ ಮನೆಗಳಿಗೆ ನಳ ಸಂಪರ್ಕ: ರಾಜ್ಯದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಈವರೆಗೆ 46.98 ಲಕ್ಷ ಮನೆಗಳಿಗೆ ಕಾರ್ಯತ್ಮಕ ನಳ ಸಂಪರ್ಕ ಕಲ್ಪಿಸಲಾಗಿದೆ. 71.50 ಲಕ್ಷ ಗ್ರಾಮೀಣ ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ವಿಧಾನಪರಿಷತ್‌ನ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಕೇಶವ ಪ್ರಸಾದ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಒಟ್ಟು 101.17 ಲಕ್ಷ ಗ್ರಾಮೀಣ ಮನೆಗಳಿವೆ. ಜಲಜೀವನ್ ಮಿಷನ್ ಯೋಜನೆಯಡಿ ಈವರೆಗೆ 71.50 ಲಕ್ಷ ಗ್ರಾಮೀಣ ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಒದಗಿಸಲಾಗಿದೆ. ಈ ಯೋಜನೆಗೆ ಈವರೆಗೆ ಕೇಂದ್ರ ಸರ್ಕಾರ ರೂ.6918.31 ಕೋಟಿ ಹಾಗೂ ರಾಜ್ಯ ಸರ್ಕಾರ ರೂ.9226.09 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದರು.

ಜಲಜೀವನ್ ಮಿಷನ್ ಕಾರ್ಯಕ್ರಮದಡಿಯಲ್ಲಿ ಸುಸ್ಥಿರ ಜಲಮೂಲವನ್ನು ಆಧರಿಸಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಸದರಿ ಯೋಜನೆಯ ಕಳಪೆ ಕಾಮಗಾರಿಗಳ ದೂರುಗಳನ್ನು ಪರಿಗಣಿಸಿ, ಈ ಕಾಮಗಾರಿಗಳನ್ನು 3ನೇ ವ್ಯಕ್ತಿ ತಪಾಸಣಾ ಸಂಸ್ಥೆಯಿಂದ ಪರಿಶೀಲಿಸಲು ತೀರ್ಮಾನಿಸಲಾಗಿದೆ. ಅದರಂತೆ ಮೆ.ಬ್ಯೂರೋ ವೆರಿಟಿಸ್ (ಇಂ) ಪ್ರೈ.ಲಿ. ಸಂಸ್ಥೆಯಿಂದ 3ನೇ ವ್ಯಕ್ತಿ ತಪಾಸಣೆಯನ್ನು ಕೈಗೊಳ್ಳಲಾಗುತ್ತಿದೆ ಎಂದು ಪ್ರಿಯಾಂಕ್​ ಖರ್ಗೆ ಹೇಳಿದರು.

ಕೇಂದ್ರ ಸರ್ಕಾರವು ಜಲ ಜೀವನ್ ಮಿಷನ್ ಯೋಜನೆಗಾಗಿ ಬಿಡುಗಡೆ ಮಾಡಿರುವ ಅನುದಾನದ ಪೈಕಿ ಅಕ್ಟೋಬರ್-23 ರ ಅಂತ್ಯಕ್ಕೆ ರೂ.764.69 ಕೋಟಿಗಳ ಅನುದಾನ ಬಾಕಿ ಇರುತ್ತದೆ. ಸದರಿ ಅನುದಾನವನ್ನು ವಿಭಾಗಗಳ ಕೋರಿಕೆಯಂತೆ ಬಿಡುಗಡೆ ಮಾಡಿ ವೆಚ್ಚ ಭರಿಸಲು ಕ್ರಮವಹಿಸಲಾಗಿದೆ. ಯೋಜನೆಯನ್ನು ಪೂರ್ಣಗೊಳಿಸಲು ಕಾಲ ಕಾಲಕ್ಕೆ ಪ್ರಗತಿ ಪರಿಶೀಲನಾ ಸಭೆಗಳನ್ನು ಆಯೋಜಿಸಿ ಕಾಮಗಾರಿಗಳ ಪ್ರಗತಿಯ ಹಂತವನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ವಿವರಿಸಿದರು.

ಇದನ್ನೂ ಓದಿ: ಪರಿಷತ್​ನಲ್ಲಿ ಗ್ಯಾರಂಟಿ ಸ್ಕೀಮ್​​ಗೆ ಎಸ್ಸಿ-ಎಸ್ಟಿ ಹಣ ಬಳಕೆ ಗದ್ದಲ; ಬಿಜೆಪಿ, ಜೆಡಿಎಸ್ ಧರಣಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.