ಬೆಳಗಾವಿ: ಒಂದೇ ದಿನ ಎಂಟು ಜನ ಗರ್ಭಿಣಿಯರಿಗೆ ಕೊರೊನಾ ಸೋಂಕು ತಗುಲಿದ ಹಿನ್ನಲೆ ಗೋಕಾಕ್ ಪಟ್ಟಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಸೀಲ್ಡೌನ್ ಮಾಡಲಾಗಿದೆ.
ಗೋಕಾಕ್ ನಗರದಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹೋಗಿದ್ದ ಎಂಟು ಜನ ಗರ್ಭಿಣಿಯರಿಗೆ ನಿನ್ನೆಯಷ್ಟೇ ಸೋಂಕು ಪತ್ತೆಯಾಗಿತ್ತು. ಹೀಗಾಗಿ ಮುಂಜಾಗ್ರತ ಕ್ರಮವಾಗಿ ಹಾಗೂ ಆಸ್ಪತ್ರೆಯಲ್ಲಿ ಹೆರಿಗೆಯಾದ ಮಹಿಳೆಯರಿಗೂ ಸೋಂಕು ಹರಡುವ ಭೀತಿಯಿಂದ ಸೀಲ್ಡೌನ್ ಮಾಡಲಾಗಿದೆ.
ಇದಲ್ಲದೇ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಆಗಮಿಸಿದ್ದ ಬಾಣಂತಿಯರು ಸೇರಿ 20ಕ್ಕೂ ಅಧಿಕ ಜನರಿಗೆ ಆರೋಗ್ಯ ಅಧಿಕಾರಿಗಳು ಕ್ವಾರಂಟೈನ್ ಮಾಡಿದ್ದಾರೆ.