ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನಲೆಯಲ್ಲಿ ಇಲ್ಲಿನ ಸಾತಾರಾ ಜಿಲ್ಲೆಯ ಕೊಯ್ನಾ ಜಲಾಶಯದಲ್ಲಿ 80 ಟಿಎಂಸಿ ನೀರು ಸಂಗ್ರಹವಾಗಿದೆ ಎಂದು ಸಾತಾರ ನೀರಾವರಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಕೊಯ್ನಾ ಜಲಾಶಯ ಭಾಗದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಜಲಾಶಯ ಭರ್ತಿ ಆಗುವ ಸಾಧ್ಯತೆಯಿದ್ದು, ಇಂದು 11 ಗಂಟೆಗೆ ಕೊಯ್ನಾದಿಂದ 2,100 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುವುದು. ಇನ್ನು ಕೊಯ್ನಾ ಜಲಾಶಯದಲ್ಲಿ ಒಟ್ಟು 105 ಟಿಎಂಸಿ ನೀರು ತುಂಬುವ ಸಾಮರ್ಥ್ಯವಿದೆ. ಸದ್ಯ 80 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ.
ಇನ್ನೊಂದು ವಾರದಲ್ಲಿ ಜಲಾಶಯ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 2,100 ಕ್ಯೂಸೆಕ್ ನೀರು ಬಿಡುಗಡೆ ಮಾಡುವುದಾಗಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.