ಚಿಕ್ಕೋಡಿ: ಎಕ್ಷಂಬಾ ಪಟ್ಟಣದಲ್ಲಿಂದು 8ನೇ ಪ್ರೇರಣಾ ಉತ್ಸವಕ್ಕೆ ಚಾಲನೆ ನೀಡಲಾಯಿತು.
ಮಹಿಳಾ ಮತ್ತು ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಕಣೇರಿ ಮಠದ ಅದ್ರುಶ್ಯ ಶ್ರೀ ಕಾಡಸಿದ್ಧೇಶ್ವರ ಮಹಾಸ್ವಾಮಿಗಳು ನಾಡಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಜ್ಯೋತಿ ಬೆಳಗಿಸುವ ಮೂಲಕ ಪ್ರೇರಣಾ ಉತ್ಸವದ ಹಾಗೂ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಮಾಡಲಾಯಿತು.
ಕಾರ್ಯಕ್ರಮದ ಅಂಗವಾಗಿ ಬಸವ ಜ್ಯೋತಿ ಯುಥ್ ಫೌಂಡೇಷನ್ ವತಿಯಿಂದ ಹಮ್ಮಿಕೊಳ್ಳಲಾದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯಲ್ಲಿ 800ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು, ಅದರಲ್ಲಿ 30 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ KSI, PSI, PC, FDA, SDA ತರಬೇತಿಗೆ ಅವಕಾಶ ನೀಡಲಾಗಿದೆ. ಇದೇ ಸಂದರ್ಭದಲ್ಲಿ ಕಣೇರಿ ಮಠದ ಅದ್ರುಶ್ಯ ಶ್ರೀ ಕಾಡಸಿದ್ಧೇಶ್ವರ ಮಹಾಸ್ವಾಮಿಗಳು ಹಾಗೂ ತಾಲೂಕಿನಿಂದ ಕೆ.ಎ.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಇಬ್ಬರಿಗೆ ಸನ್ಮಾನಿಸಿ ಗೌರವಿಸಲಾಯಿತು.