ETV Bharat / state

ಬೆಳಗಾವಿ: ಪೋಷಕರ ಬುದ್ಧಿವಾದಕ್ಕೆ ಮನನೊಂದು 14 ವರ್ಷದ ಬಾಲಕ ಆತ್ಮಹತ್ಯೆ

ಪೋಷಕರು ಬುದ್ಧಿ ಹೇಳಿದ್ದಕ್ಕೆ ಮನಸ್ಸಿಗೆ ಹಚ್ಚಿಕೊಂಡ ಅಪ್ರಾಪ್ತ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಬಾಲಕ ಆತ್ಮಹತ್ಯೆ
ಬಾಲಕ ಆತ್ಮಹತ್ಯೆ
author img

By ETV Bharat Karnataka Team

Published : Nov 14, 2023, 9:41 AM IST

Updated : Nov 14, 2023, 2:06 PM IST

ಬೆಳಗಾವಿ: ದೀಪಾವಳಿ ಹಬ್ಬದ ರಜೆ ಇದೆ ಎಂದು ಸುಮ್ಮನೆ ಹೊರಗಡೆ ತಿರುಗಾಡಬೇಡ, ಓದಿನ ಕಡೆಯೂ ಗಮನ ಹರಿಸುವಂತೆ ಪೋಷಕರು ಬುದ್ಧಿವಾದ ಹೇಳಿದ್ದನ್ನೇ ಮನಸ್ಸಿಗೆ ಹಚ್ಚಿಕೊಂಡು ಮಗ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದದಲ್ಲಿ ಸೋಮವಾರ ನಡೆದಿದೆ. ತಮ್ಮ ಮನೆಯ ಮಹಡಿಯ ಮೇಲಿನ ರೂಮಿನಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತ ಬಾಲಕ ಮೂಡಲಗಿಯ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ. ಇನ್ನು ಒಂದು ದಿನದಲ್ಲಿ ಶಾಲೆ ಪ್ರಾರಂಭವಾಗುತ್ತದೆ. ಸರಿಯಾಗಿ ಓದಿಕೊ ಎಂದು ಪೋಷಕರು ಬುದ್ಧಿವಾದ ಹೇಳಿದ ಬಳಿಕ ಬಾಲಕ ಪ್ರಾಣ ಕಳೆದುಕೊಂಡಿದ್ದಾನೆ. ಮಗನ ಸಾವಿನಿಂದ ಪೋಷಕರು ದಿಗ್ಭ್ರಾಂತರಾಗಿದ್ದಾರೆ. ಮಗನಿಗೆ ಬುದ್ಧಿವಾದ ಹೇಳಿದ್ದೆ ತಪ್ಪಾಯಿತೆ ಎಂದು ಗೋಳಾಡುತ್ತಿದ್ದಾರೆ. ಈ ಸಂಬಂಧ ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪುಸ್ತಕ ಖರೀದಿಸಲು ಹಣ ನೀಡದ ಪೋಷಕರು: ಮನನೊಂದು 7ನೇ ತರಗತಿ ಬಾಲಕ ಆತ್ಮಹತ್ಯೆ

ಮಂಗಳೂರಲ್ಲಿ ಸೋಮವಾರವಷ್ಟೇ ಎಂಬಿಬಿಎಸ್​ ವಿದ್ಯಾರ್ಥಿನಿ ಆತ್ಮಹತ್ಯೆ: ಮಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಸೋಮವಾರಷ್ಟೇ ಆತ್ಮಹತ್ಯೆಗೆ ಶರಣಾಗಿದ್ದಳು. ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ(20) ಆತ್ಮಹತ್ಯೆ ಮಾಡಿಕೊಂಡವರು. ಜೀವನದಲ್ಲಿ ತಾನು ಹತಾಶಳಾಗಿದ್ದೇನೆ ಎಂದು ಬರೆದಿಟ್ಟು ವಿದ್ಯಾರ್ಥಿನಿ ಪ್ರಾಣ ಕಳೆದುಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಇವರ ತಂದೆ ಪ್ರಶಾಂತ ಶೆಟ್ಟಿ ಮತ್ತು ತಾಯಿ ನೆಲೆಸಿದ್ದು, ಪ್ರಕೃತಿ ಶೆಟ್ಟಿ ಹಾಸ್ಟೆಲ್​ನಲ್ಲಿ ಉಳಿದುಕೊಂಡು ವ್ಯಾಸಂಗ ಮಾಡುತ್ತಿದ್ದರು. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಇತ್ತೀಚೆಗೆ ಸಣ್ಣ ವಿಷಯಗಳಿಗೆ ಅಪ್ರಾಪ್ತರು ಮತ್ತು ಯುವಕ ಯುವತಿಯರು ಆತ್ಮಹತ್ಯೆಗೆ ಶರಣಾಗುತ್ತಿರುವುದು ಆತಂಕಕಾರಿಯಾಗಿದೆ. ಇತ್ತೀಚೆಗಷ್ಟೇ ತೆಲಂಗಾಣ ರಾಜ್ಯದ ಭದ್ರಾದ್ರಿ ಕೊತಗೂಡೆಂ ಜಿಲ್ಲೆಯ ಬೆಂಡಲಪಾಡು ಗ್ರಾಮದಲ್ಲಿ 11 ವರ್ಷದ ಬಾಲಕನೊಬ್ಬ ಪುಸ್ತಕ ಖರೀದಿಗೆ ಪೋಷಕರು ಹಣ ಕೊಟ್ಟಿಲ್ಲವೆಂದು ಆತ್ಮಹತ್ಯೆಗೆ ಶರಣಾಗಿದ್ದ. 7ನೇ ತರಗತಿಯಲ್ಲಿ ಓದುತ್ತಿರುವ ಬಾಲಕ ಸುಧೀರ್​ ಬಾಬು ಪುಸ್ತಕ ಖರೀದಿಸುವುದಕ್ಕಾಗಿ ಪೋಷಕರನ್ನು ಹಣ ಕೇಳಿದ್ದ. ಆದ್ರೆ ಪೋಷಕರು ಹಣ ನೀಡಲು ನಿರಾಕರಿಸಿದ್ದರು. ಇದರಿಂದ ಬೇಸರಿಸಿಕೊಂಡ ಬಾಲಕ, ಬೆಂಡಲಪಾಡುವಿನ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಹಾಸನದಲ್ಲಿ ಕಾಲೇಜಿನಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ: ಹಾಸನ ನಗರದ ಹೊರವಲಯದಲ್ಲಿರುವ ಕಾಲೇಜುವೊಂದರಲ್ಲಿ ಡಿಪ್ಲೋಮಾ ಪ್ರಥಮ ವರ್ಷದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವತಿ ಕಾಲೇಜಿನಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಇತ್ತೀಚೆಗೆ ವರದಿಯಾಗಿತ್ತು. ಮೃತರನ್ನು ಚನ್ನರಾಯಪಟ್ಟಣ ಸಮೀಪದ ಹೊನ್ನ ಶೆಟ್ಟಿಹಳ್ಳಿ ಗ್ರಾಮದ ಯುವತಿ ಎಂದು ಗುರುತಿಸಲಾಗಿತ್ತು. ಘಟನೆ ಕಾರಣ ತಿಳಿದುಬಂದಿರಲಿಲ್ಲ.

Last Updated : Nov 14, 2023, 2:06 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.