ಚಿಕ್ಕೋಡಿ: ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಗೋಡೆ ಕುಸಿದಿದ್ದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಹುಕ್ಕೇರಿ ತಾಲೂಕಿನ ಅರಳಿಕಟ್ಟಿ ಗ್ರಾಮದಲ್ಲಿ ನಡೆದಿದೆ.
ಸತ್ಯಪ್ಪಾ ಬಡಗುರೆ (60) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ರಾತ್ರಿ ಸುರಿದ ಭಾರಿ ಮಳೆಯಿಂದ ಹೊರಗೆ ಕಟ್ಟಿದ್ದ ದನಗಳನ್ನು ಕೊಟ್ಟಿಗೆಯಲ್ಲಿ ಕಟ್ಟಲು ಹೋಗಿದ್ದರು. ಈ ವೇಳೆ ಮೈಮೇಲೆ ಗೋಡೆ ಕುಸಿದಿದ್ದರಿಂದ ಸತ್ಯಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ.

ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.