ETV Bharat / state

ವೈದ್ಯಕೀಯ ಶಿಕ್ಷಣ ಇಲಾಖೆಯನ್ನು ಆರೋಗ್ಯ ಇಲಾಖೆಯೊಂದಿಗೆ ವಿಲೀನಗೊಳಿಸಬೇಕು: ಎ.ಪುಟ್ಟಸ್ವಾಮಿ ಆಗ್ರಹ

author img

By

Published : Feb 7, 2021, 3:34 PM IST

ಆರೋಗ್ಯ ಇಲಾಖೆಯಲ್ಲಿ ಖಾಲಿ ಉಳಿದಿರುವ 25 ಸಾವಿರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು. ಹುದ್ದೆಗಳನ್ನು ಖಾಲಿ ಇಟ್ಟುಕೊಂಡು ಕೆಲಸ ಮಾಡುತ್ತಿರುವುದರಿಂದ ಆರೋಗ್ಯ ಇಲಾಖೆ ಸಿಬ್ಬಂದಿ ಒತ್ತಡದಲ್ಲಿ ಬೆಂದು ಹೋಗಿದ್ದಾರೆ ಎಂದು ಎ.ಪುಟ್ಟಸ್ವಾಮಿ ಹೇಳಿದ್ದಾರೆ.

Puttswamy demands merge of Medical Education Department with Health
ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಕೇಂದ್ರ ಸಂಘದಿಂದ ಸುದ್ದಿಗೋಷ್ಠಿ ನಡೆಯಿತು

ಬೆಳಗಾವಿ: ವೈದ್ಯಕೀಯ ಶಿಕ್ಷಣ ಇಲಾಖೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿಲೀನಗೊಳಿಸಬೇಕು. ಬಾಕಿ ಇರುವ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪರಿಷ್ಕರಣೆ ಮಾಡಿ, ಅಗತ್ಯ ಹುದ್ದೆಗಳಿಗೆ ನೇಮಕಾತಿ ಮಾಡಬೇಕು ಎಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಕೇಂದ್ರ ಸಂಘದ ಅಧ್ಯಕ್ಷ ಎ.ಪುಟ್ಟಸ್ವಾಮಿ ಒತ್ತಾಯಿಸಿದರು.

ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಕೇಂದ್ರ ಸಂಘದಿಂದ ಸುದ್ದಿಗೋಷ್ಠಿ

ನಗರದಲ್ಲಿ ಮಾತನಾಡಿದ ಅವರು, ಕೋವಿಡ್-19 ಸಮಯದಲ್ಲಿ ತಮ್ಮ ಕೌಟುಂಬಿಕ ಸಮಸ್ಯೆಗಳನ್ನು ಬದಿಗೊತ್ತಿ ಕೊರೊನಾ ಸೇನಾನಿಗಳಾಗಿ ಜೀವದ ಹಂಗು ತೊರೆದು ಕರ್ತವ್ಯನಿರತರಾಗಿರುವ ಇಲಾಖೆಯ ಅರೆ ವೈದ್ಯಕೀಯ ಮತ್ತು ಇತರೆ ಸಿಬ್ಬಂದಿ, ವೈದ್ಯರಿಗೆ ನೀಡಿರುವಂತೆ ವಿಶೇಷ ಭತ್ಯೆ ನೀಡಬೇಕು ಎಂದು ಆಗ್ರಹಿಸಿದರು.

ಓದಿ : ಸರ್ಕಾರಿ ಕಾರ್ಯಕ್ರಮದಲ್ಲಿ ಮತಯಾಚಿಸಿದ ಸಚಿವ ಬಿ. ಶ್ರೀರಾಮುಲು, ಪ್ರತಾಪ್ ಗೌಡ ಪಾಟೀಲ್

ಆರೋಗ್ಯ ಇಲಾಖೆಯಲ್ಲಿ ಖಾಲಿ ಉಳಿದಿರುವ 25 ಸಾವಿರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕು. 25 ಸಾವಿರ ಹುದ್ದೆಗಳನ್ನು ಖಾಲಿ ಇಟ್ಟುಕೊಂಡು ಕೆಲಸ ಮಾಡುತ್ತಿರುವುದರಿಂದ ಆರೋಗ್ಯ ಇಲಾಖೆ ಸಿಬ್ಬಂದಿ ಒತ್ತಡದಲ್ಲಿ ಬೆಂದು ಹೋಗಿದ್ದಾರೆ. ಹೀಗಾಗಿ, ಸಿಬ್ಬಂದಿಯ ಮಾನಸಿಕ ಒತ್ತಡ ಕಡಿಮೆ ಮಾಡಲು ನೇಮಕಾತಿ ಮಾಡಿಕೊಳ್ಳಬೇಕು. ಪರಿಷ್ಕರಣೆ, ಸೇವಾ ಜೇಷ್ಠತೆ ಆಧಾರದ ಮೇಲೆ ನೇಮಕಾತಿ ನಡೆಯಬೇಕು ಎಂದರು.

ನಮ್ಮ ಸಂಘಟನೆ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಆರೋಗ್ಯ ಇಲಾಖೆ ಸಿಬ್ಬಂದಿ ತಲುಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ಇದರ ಜೊತೆಗೆ ಆರೋಗ್ಯ ಇಲಾಖೆ ಸಿಬ್ಬಂದಿಯ ಸಮಸ್ಯೆಗಳನ್ನೂ ಸರ್ಕಾರಕ್ಕೆ ತಿಳಿಸಲಾಗುವುದು. ಈಗಾಗಲೇ ಆರೋಗ್ಯ ಇಲಾಖೆಯ ನೌಕರರ ನಾಲ್ಕು ಬೇಡಿಕೆಗಳನ್ನು ಸರ್ಕಾರಕ್ಕೆ ತಿಳಿಸಲಾಗಿದೆ ಎಂದು ತಿಳಿಸಿದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.