ಚಿಕ್ಕೋಡಿ: ವಸತಿ ಗೃಹದಲ್ಲಿ ಯೋಧ ಆತ್ಮಹತ್ಯೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ನಡೆದಿದೆ.
ಹುಕ್ಕೇರಿ ಪಟ್ಟಣದ ಕೋರ್ಟ್ ಸರ್ಕಲ್ ಹತ್ತಿರದ ರಾಮಕೃಷ್ಣ ಲಾಡ್ಜ್ ನಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರ ಗ್ರಾಮದ ಪ್ರಮೋದ ಬುಜಬುಲಿ ಕಡಹಟ್ಟಿ (32) ಯೋಧ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.
ಜಮ್ಮುವಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಯೋಧ ಪ್ರಮೋದ, ಇತ್ತೀಚಿಗೆ ರಜೆ ಮೇಲೆ ಊರಿಗೆ ಬಂದಿದ್ದರು, ಈತ ಮದುವೆಯಾಗಿದ್ದರೂ ಬೇರೆ ಯುವತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎಂದು ಹೇಳಲಾಗುತ್ತಿದೆ.
ಈ ಕುರಿತು ಮನೆಯಲ್ಲಿ ವಾಗ್ವಾದವಾಗಿತ್ತು. ಅಲ್ಲಿಂದ ಮನನೊಂದು ವಸತಿ ಗೃಹಕ್ಕೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಅನೈತಿಕ ಸಂಬಂಧವೇ ಕಾರಣ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಹುಕ್ಕೇರಿ ಪೋಲಿಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಕೊಂಡಿದ್ದಾರೆ.