ಚಿಕ್ಕೋಡಿ(ಬೆಳಗಾವಿ): ಬೆಳಗಾವಿ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿ, ಕಬ್ಬಿನ ಗದ್ದೆಯಲ್ಲಿ ಎಸೆದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಯಡೂರುವಾಡಿ ಗ್ರಾಮದಲ್ಲಿ ನಡೆದಿದೆ. ಯಡೂರುವಾಡಿ ಗ್ರಾಮದ ಅನೀಲ್ ಸವಳೆ(30) ಕೊಲೆಗೀಡಾಗಿರುವ ಯುವಕ.
ದುಷ್ಕರ್ಮಿಗಳು ಅನೀಲ್ನನ್ನ ಕೊಲೆ ಮಾಡಿ ಗ್ರಾಮದ ಹೊರವಲಯದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಶವವನ್ನು ಎಸೆದು ಪರಾರಿಯಾಗಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಅಂಕಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುವಕನ ಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಕುರಿತು ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.