ಬೆಳಗಾವಿ: ವಿಜಯಪುರ ಷಣ್ಮುಖಾರೂಢ ಮಠ ಹಾಗೂ ಹುಬ್ಬಳ್ಳಿ ಶಾಂತಾಶ್ರಮದ ಅಭಿನವ ಶಿವಪುತ್ರ ಸ್ವಾಮೀಜಿ ಹೃದಯಾಘಾತದಿಂದ ಇಂದು ರಾತ್ರಿ 8.30ಕ್ಕೆ ಲಿಂಗೈಕ್ಯರಾಗಿದ್ದಾರೆ. ನಗರದ ಕೆಎಲ್ಇ ಆಸ್ಪತ್ರೆಗೆ ಇಂದು ಸಂಜೆ ದಾಖಲಾಗಿದ್ದ ಶ್ರೀಗಳು ಚಿಕಿತ್ಸೆ ಫಲಿಸದೇ ಲಿಂಗೈಕ್ಯರಾದರು.
ಇವರು ಕಳೆದ ಎರಡು ದಿನಗಳಿಂದ ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆ ಇಂದು ಸಂಜೆ ಕೆ.ಎಲ್.ಇ ಆಸ್ಪತ್ರೆಗೆ ಕರೆತರಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಲಿಂಗೈಕ್ಯರಾದರು ಎಂದು ಶ್ರೀಮಠದ ಉತ್ತರಾಧಿಕಾರಿ ಅಭಿನವ ಸಿದ್ಧಾರೂಢ ಸ್ವಾಮೀಜಿಯವರು ತಿಳಿಸಿದ್ದಾರೆ.
ಅಭಿನವ ಶಿವಪುತ್ರ ಸ್ವಾಮೀಜಿ ಸಮಾಧಿಕ್ರಿಯೆ ಶನಿವಾರ ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿಯ ಸಿದ್ಧಾರೂಢ ಮಠದ ಬಳಿಯ ಶಾಂತಾಶ್ರಮದ ಆವರಣದಲ್ಲಿ ನೆರೆವೇರಲಿದೆ. ಶ್ರೀಗಳ ನಿಧನಕ್ಕೆ ಇಂಚಲದ ಸಾಧು ಸಂಸ್ಥಾನಮಠದ ಡಾ.ಶಿವಾನಂದ ಭಾರತಿ ಸ್ವಾಮೀಜಿ, ಬೀದರ್ ಶಿವಕುಮಾರ ಸ್ವಾಮೀಜಿ, ಗದುಗಿನ ಡಂಬಳ ಜಗದ್ಗುರು ತೋಂಟದ ಸಿದ್ಧರಾಮ ಸ್ವಾಮೀಜಿ, ನಾಗನೂರು ರುದ್ರಾಕ್ಷಿ ಮಠದ ಅಲ್ಲಮಪ್ರಭು ಸ್ವಾಮೀಜಿ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತಿತರರ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.