ಚಿಕ್ಕೋಡಿ : ಸ್ಥಳೀಯ ಪ್ರಾದೇಶಿಕ ಸಾರಿಗೆ ಆಯುಕ್ತರ ಕಚೇರಿ ಮೇಲೆ ರಾಜ್ಯ ಭ್ರಷ್ಟಾಚಾರ ನಿಗ್ರಹ ದಳದ 20ಕ್ಕೂ ಹೆಚ್ಚು ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಎಜೆಂಟರ ಮೂಲಕ ಆರ್ಟಿಓ ಕಚೇರಿಗೆ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಖಾಸಗಿ ವ್ಯಕ್ತಿ ನೀಡಿದ್ದ ದೂರು ಆಧರಿಸಿ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಪ್ರಾದೇಶಿಕ ಸಾರಿಗೆ ಆಯುಕ್ತರ ಕಚೇರಿಯಲ್ಲಿ ಕೆಲ ಎಸಿಬಿ ಅಧಿಕಾರಿಗಳು ಮಹತ್ವದ ದಾಖಲೆ ತಪಾಸಣೆ ನಡೆಸುತ್ತಿದ್ದರೆ, ಇನ್ನುಳಿದ ಅಧಿಕಾರಿಗಳು ಏಜೆಂಟರ ಶೆಡ್ ಮೇಲೆ ದಾಳಿ ನಡೆಸಿದ್ದಾರೆ.
ಎಸಿಬಿಯ ನಾಲ್ವರು ಪಿಎಸ್ಐ ಸೇರಿದಂತೆ 20ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಎಸಿಬಿ ಅಧಿಕಾರಿಗಳನ್ನು ಕಂಡು ಕಚೇರಿಯಲ್ಲಿದ್ದ ಏಜೆಂಟರು ಅಲ್ಲಿಂದ ಕಾಲ್ಕಿತ್ತಿದ್ದಾರೆ.