ಬೆಳಗಾವಿ: ಜಿಲ್ಲಾ ಕೈಗಾರಿಕಾ ಕೇಂದ್ರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, 50 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಇಬ್ಬರು ಜಿಲ್ಲಾ ಕೈಗಾರಿಕಾ ಕೇಂದ್ರದ ಹಿರಿಯ ಅಧಿಕಾರಿಗಳು ಸಿಕ್ಕಿ ಬಿದ್ದಿದ್ದಾರೆ.
ಬೆಳಗಾವಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್.ಹೆಚ್ ಶಿವಪುತ್ರಪ್ಪ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಪದ್ಮನಾಥ ಜಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳು.
ಪ್ರಕರಣದ ಹಿನ್ನೆಲೆ: ಹಿರಿಯ ಅಧಿಕಾರಿಗಳಿಬ್ಬರು ಲಂಚಕ್ಕೆ ಬೇಡಿಕೆ ಇಟ್ಟ ಬಗ್ಗೆ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಉದ್ಯಮಿ ಗಿರೀಶ್ ಕುಲಕರ್ಣಿ ಎಂಬುವವರು ದೂರು ನೀಡಿದ್ದರು. ನಗರದ ಉದ್ಯಮಭಾಗದಲ್ಲಿ ಹೆಚ್ ಕೆ ಟೆಕ್ನಾಲಜಿ ಕಂಪನಿಯಲ್ಲಿ ಗಿರೀಶ್ ಕುಲಕರ್ಣಿ ಹೊಸ ಘಟಕ ಆರಂಭಿಸಿದ್ದರು. ಈ ಘಟಕಕ್ಕೆ ಕೈಗಾರಿಕಾ ಇಲಾಖೆಯಿಂದ ಶೇ. 30ರಷ್ಟು ಸಬ್ಸಿಡಿಗೆ ಅರ್ಜಿ ಸಲ್ಲಿಸಿದ್ದರು. ಸಬ್ಸಿಡಿ ಹಣ ಬಿಡುಗಡೆಗೆ ಜಿಲ್ಲಾ ಕೈಗಾರಿಕಾ ಕೇಂದ್ರದ ಹಿರಿಯ ಅಧಿಕಾರಿಗಳು 50 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಬೆಳಗಾವಿ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಲೋಕಾಯುಕ್ತ ಬೆಳಗಾವಿ ಎಸ್ ಪಿ ಯಶೋಧ ವಂಟಗೂಡಿ ಮಾರ್ಗದರ್ಶನದಲ್ಲಿ ದಾಳಿ ನಡೆದಿದೆ.
ಇದನ್ನೂ ಓದಿ: ಶಿಕ್ಷಕನ ಮತ್ತೊಂದು ಶಾಲೆಗೆ ನಿಯೋಜಿಸಲು ಲಂಚ; ಲೋಕಾಯುಕ್ತ ಬಲೆಗೆ ಬಿದ್ದ ಕಡೂರು ಬಿಇಓ