ETV Bharat / state

ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ದಾಳಿ : ಅಥಣಿಯಲ್ಲಿ ಇಬ್ಬರು ಅಧಿಕಾರಿಗಳು ವಶಕ್ಕೆ

ಅಥಣಿ ನಗರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಲಂಚ ಪಡೆಯುತ್ತಿದ್ದ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಎಸಿಬಿ ದಾಳಿ
ACB raids
author img

By

Published : Sep 22, 2021, 7:02 PM IST

ಅಥಣಿ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಕಚೇರಿ ಮೇಲೆ ಇಂದು ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಲಂಚ ಸ್ವಿಕರಿಸುತ್ತಿದ್ದ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಅಥಣಿಯಲ್ಲಿ ದಾಳಿ ನಡೆಸಿದ ಎಸಿಬಿ

ಎಇಇ ರಾಜೇಂದ್ರ ಪರ್ನಾಕರ್​ ಹಾಗೂ ದೀಪಕ್​​​ ಕುಲಕರ್ಣಿ ಎಂಬ ಅಧಿಕಾರಿಗಳು ಗುತ್ತಿಗೆದಾರರಿಂದ 68 ಸಾವಿರ ರೂಪಾಯಿ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಕೆಲ ದಿನಗಳ ಹಿಂದೆ ಈ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪಗಳು ಕೇಳಿ ಬಂದಿದ್ದವು. ಈ ಸಂಬಂಧ ಖಚಿತ ಮಾಹಿತಿ ಪಡೆದು ಎಸಿಬಿ ದಾಳಿ ನಡೆಸಿದೆ.

ಎಸಿಬಿ ಡಿಸಿಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಕಚೇರಿಯಲ್ಲಿ ಕಾಗದ ಪತ್ರಗಳನ್ನು ಅಧಿಕಾರಿಗಳು ಪರಿಶೀಲಿಸಿ ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಅತ್ಯಾಚಾರ ಆರೋಪಿ ಅರೆಸ್ಟ್​.. ವಿಚಾರ ವೇಳೆ ಕ್ಯಾಬ್​ ಡ್ರೈವರ್​ ಹೇಳಿದ್ದೇನು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.