ಬೆಳಗಾವಿ : ಕಾರು ಮತ್ತು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಮೇಲಿದ್ದ ಅಣ್ಣ-ತಂಗಿ ಸಾವನ್ನಪ್ಪಿರುವ ಘಟನೆ ಮಲಿಕವಾಡ-ನಣದಿವಾಡಿ ರಸ್ತೆಯಲ್ಲಿ ನಡೆದಿದೆ. ಪ್ರಶಾಂತ ನಾಗರಾಜ ತುಳಸಿಕಟ್ಟಿ(21) ಮತ್ತು ಪ್ರಿಯಾಂಕ ನಾಗರಾಜ ತುಳಸಿಕಟ್ಟಿ (19) ಸಾವಿನಲ್ಲೂ ಒಂದಾದ ಅಣ್ಣ-ತಂಗಿ ಎಂದು ತಿಳಿದು ಬಂದಿದೆ.
ಮೂಲತಃ ಸದಲಗಾ ಪಟ್ಟಣದ ನಿವಾಸಿಗಳಾಗಿದ್ದು, ಮಂಗಳವಾರ ಮಧ್ಯಾಹ್ನ ಚಿಕ್ಕೋಡಿಯ ಪರಟಿನಾಗಲಿಂಗೇಶ್ವರ ದೇವಸ್ಥಾನಕ್ಕೆ ಎಂದು ದ್ವಿಚಕ್ರ ವಾಹನ ಮೇಲೆ ಹೋಗುತ್ತಿರುವ ಸಂದರ್ಭದಲ್ಲಿ ಕಾರ ಡಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆ ಪಕ್ಕಕ್ಕೆ ಬಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯ ಮೂಲಕ ಕೊಲ್ಹಾಪೂರದ ಕಣೇರಿಯ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಇನ್ನು ಈ ಬಗ್ಗೆ ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ-ಧಾರವಾಡ : ಸೋಮವಾರ ತಡರಾತ್ರಿ ಧಾರವಾಡ ತಾಲೂಕಿನ ತೇಗೂರು ಗ್ರಾಮದ ಬಳಿಯ ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿತ್ತು. ಕೋಟೂರ ಗ್ರಾಮದ ಗಂಗಾಧರ (22) ಹಾಗೂ ನಾಗರಾಜ್(22) ಸಾವನ್ನಪ್ಪಿದ ಬೈಕ್ ಸವಾರರು ಎಂದು ಗುರುತಿಸಲಾಗಿತ್ತು. ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು.
ಅಪ್ಪ ಬುದ್ಧಿವಾದ ಹೇಳಿದ್ದಕ್ಕೆ ಮಗ ಆತ್ಮಹತ್ಯೆ : ಅಪ್ಪ ಬುದ್ಧಿವಾದ ಹೇಳಿದ್ದಕ್ಕೆ ಮನೆಯಲ್ಲೇ ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ತಡರಾತ್ರಿ ರಾತ್ರಿ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ನವಲಿಹಾಳ ಗ್ರಾಮದ ಆತ್ಮಾನಂದ ಸಂಜಯ ಕಾಂಡೆಕರ (16) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಸ್ಥಳಕ್ಕೆ ಕಾಗವಾಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ.. ಬಾಲಕ ಸೇರಿ ನಾಲ್ವರು ಸಾವು, ಮೂವರಿಗೆ ಗಾಯ