ಚಿಕ್ಕೋಡಿ: ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಂಕಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಹೊರ ವಲಯದ ಕೆರೂರ ಕ್ರಾಸ್ ಬಳಿಯ ಚಿಕ್ಕೋಡಿ-ವಿಜಯಪುರ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತದಲ್ಲಿ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ.
ಮೃತರನ್ನು ಚಿಕ್ಕೋಡಿಯ ಶ್ರೀಶೈಲ ಕೋರವಿ (27) ಹಾಗೂ ಸಂತೋಷ ಹುಜರೆ (28) ಎಂದು ಗುರುತಿಸಲಾಗಿದೆ. ಮೃತರಿಬ್ಬರು ಚಿಕ್ಕೋಡಿಯಿಂದ ಅಂಕಲಿಗೆ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್ಗೆ ಗುದ್ದಿದ್ದಾನೆ ಎಂಬ ಮಾಹಿತಿ ದೊರೆತಿದೆ.
ಈ ಅವಘಡಕ್ಕೆ ಬಸ್ ಚಾಲಕ ಕಾರಣ ಎನ್ನಲಾಗಿದ್ದು, ಅಪಘಾತದ ಬಳಿಕ ಬಸ್ ಅನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಮತ್ತು ನಿರ್ವಾಹಕ ಇಬ್ಬರೂ ಪರಾರಿ ಆಗಿದ್ದಾರೆ. ಈ ಕುರಿತು ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ: 17 ಬಾರಿ ವಿವಾಹವಾಗಿ ನಾನವನಲ್ಲ.. ನಾನವನಲ್ಲ.. ಎನ್ನುತ್ತಿದ್ದಾನೆ ಆಸಾಮಿ!