ಚಿಕ್ಕೋಡಿ : ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಹೊರಭಾಗದಲ್ಲಿ ನಡೆದಿದೆ.
ಪರಮಾನಂದ ಸಿದ್ದಪ್ಪ ಧರಿಗೌಡ (24) ಎಂಬ ಕಾರು ಚಾಲಕ ಸಾವನ್ನಪ್ಪಿದ್ದು, ಈತ ಅಥಣಿ ತಾಲ್ಲೂಕಿನ ಸಂಕೊನಟ್ಟಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಹಾರೂಗೇರಿ ಕಡೆಯಿಂದ ಅಥಣಿ ಕಡೆ ಹೋಗುವಾಗ ಲಾರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.