ಚಿಕ್ಕೋಡಿ: ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವಿಗೀಡಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರು ಕ್ರಾಸ್ ಬಳಿ ನಡೆದಿದೆ.
ಚಿಕ್ಕೋಡಿ ತಾಲೂಕಿನ ಕೇರೂರು ಗ್ರಾಮದ ನಿವಾಸಿ, ಸಿದ್ದಪ್ಪಾ ಬಾಡಕರ (40) ಮೃತ.
ಈ ಕುರಿತು ಅಂಕಲಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.