ETV Bharat / state

ರಾಜ್ಯ ಗಡಿ ಭಾಗದಲ್ಲಿ ಭೀಕರ ರಸ್ತೆ ಅಪಘಾತ... ಒಂದೇ ಗ್ರಾಮದ 7 ಜನರ ದುರ್ಮರಣ - etv bharath

ಟಾಟಾ ಸುಮೋ ಮತ್ತು ಮಹಾರಾಷ್ಟ್ರ ಸಾರಿಗೆ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು,ಒಂದೇ ಗ್ರಾಮದ ಏಳು ಜನರು ಸಾವನ್ನಪ್ಪಿದ್ದಾರೆ. ಎಂಟು ಜನರಿಗೆ ಗಾಯವಾಗಿದೆ.

ದುರ್ಮರಣ
author img

By

Published : Apr 13, 2019, 10:52 PM IST

ಚಿಕ್ಕೋಡಿ: ಕರ್ನಾಟಕ ಗಡಿ ಭಾಗದಲ್ಲಿರುವ ಗಡಹಿಂಗ್ಲಜ್ ಚಂದಗಡ ರಾಜ್ಯ ಹೆದ್ದಾರಿಯಲ್ಲಿ ಟಾಟಾ ಸುಮೋ ಮತ್ತು ಮಹಾರಾಷ್ಟ್ರ ಸಾರಿಗೆ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಗ್ರಾಮದ ಏಳು ಜನರು ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರ ಜಿಲ್ಲೆಯ ಗಡಹಿಂಗ್ಲಜ ಬಳಿ ಅಪಘಾತ ನಡೆದಿದೆ. ಶಿವಸೇನಾ- ಬಿಜೆಪಿ ಪ್ರಚಾರ ಸಭೆ ಮುಗಿಸಿಕೊಂಡು ಮನೆಗೆ ಮರಳುವಾಗ ಈ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ಕೊಲ್ಲಾಪುರ ಜಿಲ್ಲೆಯ ನೂಲ ಗ್ರಾಮದ ನಿವಾಸಿಗಳು ಎನ್ನಲಾಗಿದೆ.

ಅಪಘಾತದಲ್ಲಿ ಒಂದೇ ಗ್ರಾಮದ ಏಳು ಜನರು ಸಾವನ್ನಪ್ಪಿದ್ದು, ಎಂಟು ಜನರಿಗೆ ಗಾಯವಾಗಿದೆ. ಗಾಯಾಳುಗಳನ್ನು ಗಡಹಿಂಗ್ಲಜ ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲ್ಲಾಪುರ ಲೋಕಸಭಾ ಕ್ಷೇತ್ರದ ಶಿವಸೇನಾ-ಬಿಜೆಪಿಯ ಮೈತ್ರಿ ಪಕ್ಷದ ಅಭ್ಯರ್ಥಿ ಸಂಜಯ ಮಾಂಡಲಿಕ ಅವರ ಪರ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಈ ಕುರಿತು ಗಡಹಿಂಗ್ಲಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯ ಗಡಿ ಭಾಗದಲ್ಲಿರುವ ಕೊಲ್ಹಾಪುರ ಜಿಲ್ಲೆಯ ಗಡಹಿಂಗ್ಲಜ್ ಚಂದಗಡ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಚಿಕ್ಕೋಡಿ : ಕರ್ನಾಟಕ ಗಡಿಭಾಗದಲ್ಲಿರುವ ಗಡಹಿಂಗ್ಲಜ್ ಚಂದಗಡ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಗ್ರಾಮದ ಏಳು ಜನರು ಧಾರುಣ ಸಾವನಪ್ಪಿರುವ ಘಟನೆ ಮಹಾರಾಷ್ಟ್ರ ರಾಜ್ಯದ ಕೊಲ್ಹಾಪುರ ಜಿಲ್ಲೆಯ ಗಡಹಿಂಗ್ಲಜ ಬಳಿ ನಡೆದಿದೆ. ಟಾಟಾ ಸುಮೋ ಮತ್ತು ಮಹಾರಾಷ್ಟ್ರ ಸಾರಿಗೆ ಬಸ್ ಮಧ್ಯ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಗ್ರಾಮದ ಏಳು ಜನರು ಸಾವನಪ್ಪಿದ್ದು. ಇನ್ನು ಎಂಟು ಜನರಿಗೆ ಗಾಯವಾಗಿದೆ. ಶಿವಸೇನಾ - ಬಿಜೆಪಿ ಪ್ರಚಾರ ಸಭೆ ಮುಗಿಸಿಕೊಂಡು ಮನೆಗೆ ಮರಳುವಾಗ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಮೃತಪಟ್ಟವರೆಲ್ಲರೂ ಕೊಲ್ಲಾಪೂರ ಜಿಲ್ಲೆಯ ನೂಲ ಗ್ರಾಮದ ನಿವಾಸಿಗಳು. ಉಳಿದ ಗಾಯಾಳುಗಳನ್ನು ಗಡಹಿಂಗ್ಲಜ ಪಟ್ಟಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಲ್ಹಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶಿವಸೇನಾ-ಬಿಜೆಪಿಯ ಮೈತ್ರಿ ಪಕ್ಷದ ಅಭ್ಯರ್ಥಿ ಸಂಜಯ ಮಾಂಡಲಿಕ ಅವರ ಪರ ಪ್ರಚಾರಕ್ಕೆ ಆಗಮಿಸಿದ ವೇಳೆ ಈ ಅವಘಡ ಸಂಭವಿಸಿದೆ. ಈ ಕುರಿತು ಗಡಹಿಂಗ್ಲಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಜಯ ಕೌಲಗಿ ಚಿಕ್ಕೋಡಿ ( ಈ ಸುದ್ದಿ ಕರ್ನಾಟಕ ಗಡಿಯಲ್ಲಿದ್ದು ಈ ಭಾಗದಲ್ಲಿ ಕನ್ನಡ ಭಾಷೆ ಹೆಚ್ಚಾಗಿ ಬಳಕೆ ಮಾಡುತ್ತಾರೆ)
ETV Bharat Logo

Copyright © 2024 Ushodaya Enterprises Pvt. Ltd., All Rights Reserved.