ಚಿಕ್ಕೋಡಿ : ಎರಡನೇ ಹಂತದ ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ಕರಗಾಂವ ಮತಗಟ್ಟೆಯಲ್ಲಿ ಅಭ್ಯರ್ಥಿಗಳು ಹಾಗೂ ಮುಖಂಡರು ಬಂದು ಮತಪ್ರಚಾರ ಮಾಡಿದ್ದಾರೆನ್ನುವ ಆರೋಪ ಕೇಳಿ ಬಂದಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರಗಾಂವ ಗ್ರಾಮ ಪಂಚಾಯತ್ನಲ್ಲಿ ಈ ಘಟನೆ ನಡೆದಿದೆ. ಮತಗಟ್ಟೆಯಲ್ಲಿ ನಿಂತು ಅಭ್ಯರ್ಥಿಗಳ ಪರ ಗ್ರಾಮದ ಮುಖಂಡರು ಪ್ರಚಾರ ಮಾಡಿದ್ದು, ಚುನಾವಣಾ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆ ಸುಮ್ಮನೆ ಕುಳಿತಿದ್ದರೆನ್ನುವ ಆರೋಪ ಕೇಳಿ ಬಂದಿದೆ.
ಈ ಸುದ್ದಿಯನ್ನೂ ಓದಿ: ಬೆಳಗಾವಿ: ಬ್ಯಾಲೆಟ್ ಪೇಪರ್ನಲ್ಲಿ 'ಬಕೆಟ್' ಬದಲು 'ಅಲ್ಮೇರಾ' ಚಿಹ್ನೆ ಮುದ್ರಣ
ವಿರೋಧ ಪಕ್ಷದ ಅಭ್ಯರ್ಥಿಗಳಿಂದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಗ್ರಾಮದಲ್ಲಿ ಕೆಲ ಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು.