ETV Bharat / state

ಕಬ್ಬಿನ ಬಾಕಿ ಹಣ ಪಾವತಿಸದ ಕಾರ್ಖಾನೆಗಳ ವಿರುದ್ಧ ಕ್ರಮ: ಸಚಿವ ತಿಮ್ಮಾಪುರ್ ಎಚ್ಚರಿಕೆ - undefined

ರಾಜ್ಯದಲ್ಲಿ ರೈತರ ಕಬ್ಬಿನ ಬಾಕಿ ಬಿಲ್ ನೀಡದ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಎಫ್​ಆರ್​ಪಿ ದರದ ಅನ್ವಯ ರೈತರಿಗೆ ಹಣ ನೀಡಬೇಕು ಎಂದು ನಿರ್ದೇಶನ ನೀಡಿರುವುದಾಗಿ ಸಕ್ಕರೆ ಸಚಿವ ಆರ್.ಬಿ. ತಿಮ್ಮಾಪುರ್ ತಿಳಿಸಿದ್ದಾರೆ.

ತಿಮ್ಮಾಪುರ್
author img

By

Published : Jun 18, 2019, 11:51 PM IST

ಬೆಳಗಾವಿ: ರೈತರ ಕಬ್ಬಿನ ಬಾಕಿ ಹಣ ಪಾವತಿಸದ ಕಾರ್ಖಾನೆ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಿದೆ. ರೈತರ ಹಿತ ಕಾಪಾಡುವುದು ಮಾತ್ರ ನಮ್ಮ ಕೆಲಸವೆಂದು ಸಕ್ಕರೆ ಸಚಿವ ಆರ್.ಬಿ. ತಿಮ್ಮಾಪುರ್ ಹೇಳಿದ್ದಾರೆ.

ನಗರದ ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ನಡೆದ ಆಡಳಿತ ಮಂಡಳಿ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ರೈತರ ಕಬ್ಬಿನ ಬಾಕಿ ಬಿಲ್ ನೀಡದ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಎಫ್​ಆರ್​ಪಿ ದರದ ಅನ್ವಯ ರೈತರಿಗೆ ಹಣ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ. ಒಂದು ವೇಳೆ ಇದಕ್ಕೆ ಜಗ್ಗದೆ ಇದ್ದರೆ 1 ತಿಂಗಳ ಅವಧಿಯಲ್ಲಿ ಕಬ್ಬಿನ ಬಾಕಿ ಬಿಲ್ ಕೊಡಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದರು.

ಕಬ್ಬಿನ ಬಾಕಿ ಹಣ ಪಾವತಿಸದ ಕಾರ್ಖಾನೆಗಳ ವಿರುದ್ಧ ಕ್ರಮ: ಸಚಿವ ತಿಮ್ಮಾಪುರ್

ಸರ್ಕಾರಕ್ಕೆ ರೈತರ ಬಿಲ್​ ಬಾಕಿ ಉಳಿಸಿಕೊಂಡಿರುವ ಕಾರ್ಖಾನೆ ಮಾಲೀಕರು ಯಾರೇ ಇದ್ದರೂ ಸರಿ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಇದೇ ರೀತಿಯಲ್ಲಿ ಬೆಳಗಾವಿಯ 9 ಸಕ್ಕರೆ ಕಾರ್ಖಾನೆಗಳ ವಿರುದ್ಧ ಜಿಲ್ಲಾಧಿಕಾರಿ ಮುಟ್ಟುಗೋಲು ಹಾಕಿಕೊಳ್ಳಲು ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

Intro:ರೈತರ ಹಿತ ಕಾಯುವುದು ನಮ್ಮ ಕೆಲಸ : ಸಚಿವ ತಿಮ್ಮಾಪುರ್

ಬೆಳಗಾವಿ : ರೈತರ ಕಬ್ಬಿನ ಬಾಕಿ ಹಣ ಪಾವತಿಸದ ಕಾರ್ಖಾನೆ ವಿರುದ್ದ ಸರ್ಕಾರ ಕ್ರಮ ಕೈಗೊಳ್ಳುವ ನಿರ್ಧಾರ ಮಾಡಿದ್ದು ರೈತರ ಹಿತ ಕಾಪಾಡುವುದು ಮಾತ್ರ ನಮ್ಮ ಕೆಲಸ ಎಂದು ಸಕ್ಕರೆ ಸಚಿವ ಆರ್.ಬಿ ತಿಮ್ಮಾಪುರ್ ಅಭಿಪ್ರಾಯಪಟ್ಟಿದ್ದಾರೆ.

Body:ನಗರದ ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ನಡೆದ ಆಡಳಿತ ಮಂಡಳಿ ಸದಸ್ಯರ ಸಭೆಯಲ್ಲಿ ಮಾತನಾಡಿದ ಸಚಿವ ತಿಮ್ಮಾಪುರ್. ರಾಜ್ಯದಲ್ಲಿ ರೈತರ ಕಬ್ಬಿನ ಬಾಕಿ ಬಿಲ್ ನೀಡದ ಕಾರ್ಖಾನೆಗಳ ವಿರುದ್ದ ಕ್ರಮ ಕೈಗೊಳ್ಳಲಾಗುತ್ತಿದ್ದು ಎಫ್ ಆರ್ ಪಿ ದರದ ಅನ್ವಯ ರೈತರ ಹಣ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ. ಒಂದು ವೇಳೆ ಇದಕ್ಕೆ ಜಗ್ಗದೆ ಇದ್ದರೆ ಒಂದು ತಿಂಗಳ ಅವಧಿಯಲ್ಲಿ ಕಬ್ಬಿನ ಬಿಲ್ ಕೊಡಿಸುವ ಕೆಲಸ ಸರ್ಕಾರ ಮಾಡಲಿದೆ ಎಂದರು.

Conclusion:ಸರ್ಕಾರಕ್ಕೆ ರೈತರ ಹಿತ ಕಾಪಾಡುವುದು ಮುಖ್ಯ ಕಾರ್ಖಾನೆ ಮಾಲಿಕರು ಯಾರೆ ಇದ್ದರು ಅವರ ವಿರುದ್ಧ ಕ್ರಮ ಕೈಗೊಳ್ಳುವುದಂತು ಸತ್ಯ ಎಂದರು.ಇದೇ ರೀತಿಯಲ್ಲಿ ಬೆಳಗಾವಿಯ ಒಂಬತ್ತು ಸಕ್ಕರೆ ಕಾರ್ಖಾನೆಗಳ ವಿರುದ್ದ ಜಿಲ್ಲಾಧಿಕಾರಿಗಳು ಮುಟ್ಟುಗೋಲು ಹಾಕಿಕೊಳ್ಳಲು ಸೂಚನೆ ನೀಡಿದ್ದಾರೆ ಆದರೆ ಸಕ್ಕರೆ ಲಾಬಿಯನ್ನು ದಾಟಿ ರೈತರ ಬಾಕಿ ಹಣ ವಾಪಸ್ ನೀಡುವಲ್ಲಿ ಯಶಸ್ವಿಯಾಗುತ್ತದಾ ಎಂದು ಕಾದು ನೋಡಬೇಕು.

ವಿನಾಯಕ ಮಠಪತಿ
ಬೆಳಗಾವಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.