ETV Bharat / state

ಅಪರಾಧಗಳಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳದ ಇಲಾಖಾ ಅಧಿಕಾರಿಗಳ ತಲೆದಂಡ: ಎಡಿಜಿಪಿ ಪ್ರತಾಪ್ ರೆಡ್ಡಿ

ಬೆಳಗಾವಿ ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ಸಿಸಿ ಕ್ಯಾಮೆರಾ ಬಂದ್ ಆಗಿರುವ ಬಗ್ಗೆ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ತಿಳಿದುಕೊಂಡು ಸಂಬಂಧಿಸಿದವರ ಮೇಲೆ ಈ ಕ್ರಮಕೈಳ್ಳಲಾಗುವುದು. ಜೊತೆಗೆ ಸಿಸಿ ಕ್ಯಾಮೆರಾಗಳನ್ನು ಸರಿಪಡಿಸುವ ಕೆಲಸವನ್ನೂ ಮಾಡಲಾಗುವುದು ಎಂದು ಎಡಿಜಿಪಿ ಪ್ರತಾಪ್ ರೆಡ್ಡಿ ಹೇಳಿದರು.

ಎಡಿಜಿಪಿ ಪ್ರತಾಪ್ ರೆಡ್ಡಿ
ಎಡಿಜಿಪಿ ಪ್ರತಾಪ್ ರೆಡ್ಡಿ
author img

By

Published : Jan 12, 2021, 1:49 PM IST

ಬೆಳಗಾವಿ: ಡ್ರಗ್ಸ್ ಸೇರಿದಂತೆ ಇತರ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಸಂಬಂಧಿಸಿದ ಪೊಲೀಸ್ ಅಧಿಕಾರಿಗಳನ್ನೇ ತಲೆದಂಡ ಮಾಡಲಾಗುವುದು ಎಂದು ಎಡಿಜಿಪಿ ಪ್ರತಾಪ್ ರೆಡ್ಡಿ ಹೇಳಿದರು.

ಎಡಿಜಿಪಿ ಪ್ರತಾಪ್ ರೆಡ್ಡಿ ಹೇಳಿಕೆ

ನಗರದಲ್ಲಿ ಮಾಧ್ಯಮದವರೊಂದಿಗೆ ‌ಮಾತನಾಡಿದ ಅವರು, ಬೆಳಗಾವಿ ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ಸಿಸಿ ಕ್ಯಾಮೆರಾ ಬಂದ್ ಆಗಿರುವ ಬಗ್ಗೆ ಗಮನಕ್ಕೆ ಬಂದಿಲ್ಲ. ಈ ಬಗ್ಗೆ ತಿಳಿದುಕೊಂಡು ಸಂಬಂಧಿಸಿದವರ ಮೇಲೆ ಈ ಕ್ರಮಕೈಳ್ಳಲಾಗುವುದು. ಜೊತೆಗೆ ಸಿಸಿ ಕ್ಯಾಮೆರಾಗಳನ್ನು ಸರಿಪಡಿಸುವ ಕೆಲಸವನ್ನೂ ಮಾಡಲಾಗುವುದು ಎಂದರು.

ಟ್ರಾಫಿಕ್ ಎಲ್ಲ ಮಹಾನಗರಗಳಲ್ಲಿರುವ ದೊಡ್ಡ ಸಮಸ್ಯೆಯಾಗಿದ್ದು, ಇತ್ತೀಚಿನ ದಿನಗಳಲ್ಲಿ ಪೊಲೀಸ್ ಸಿಬ್ಬಂದಿ, ಪೊಲೀಸ್ ಸಬ್ ಇನ್​ಸ್ಪೆಕ್ಟರ್​ಗಳನ್ನು ಹೆಚ್ಚಿಸುವ ಕೆಲಸ ಮಾಡಲಾಗುತ್ತಿದೆ. ಇದರ ಜೊತೆಗೆ ಕೆಲ ಠಾಣೆಗಳನ್ನ ಮೇಲ್ದರ್ಜೆಗೆ ಏರಿಸಿ ಆದೇಶಗಳನ್ನ ಹೊರಡಿಸಲಾಗಿದೆ. ಕೆಲ ಅಭಿವೃದ್ಧಿ ಕಾಮಗಾರಿಗಳು ಬಂದಾಗ ಸಂಬಂಧಿಸಿದ ಇಲಾಖೆಗಳ ಜೊತೆಗೂಡಿ ಅವರ ಸಹಯೋಗದಲ್ಲಿ ಟ್ರಾಫಿಕ್ ಸಮಸ್ಯೆ ‌ಕಡಿಮೆ ಮಾಡಲು ಪ್ಲಾನ್​​ ಮಾಡಿಕೊಂಡು ಟ್ರಾಫಿಕ್ ‌ಸಮಸ್ಯೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ತಿಳಿಸಿದರು.

ಡ್ರಗ್ಸ್ ಸೇರಿದಂತೆ ಇತರ ಪ್ರಕರಣಗಳಲ್ಲಿ ಗೂಂಡಾ ಕಾಯ್ದೆಯಡಿ ಗಡಿಪಾರು ಮಾಡಲು ಪ್ರಸ್ತಾವನೆಗೆ ಕಳುಹಿಸಲಾಗಿದೆ. ಇದು ನಿರಂತರವಾಗಿ ನಡೆಯುವ ಕೆಲಸ. ಏನಾದರೂ ಅಂತಹ ಪ್ರಕರಣಗಳು ಬೆಳಕಿಗೆ ಬಂದ್ರೆ ಮಾಹಿತಿ ನೀಡಬೇಕು. ಅಂಥವರ ವಿರುದ್ಧ ಕಠಿಣಕ್ರಮ ಜರುಗಿಸಲಾಗುವುದು. ಒಂದು ವೇಳೆ ನಮ್ಮ ಇಲಾಖೆ ಪೊಲೀಸ್ ಅಧಿಕಾರಿಗಳ ತಪ್ಪ ಕಂಡು ಬಂದರೆ ಅವ್ರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರೆತೆ ವಿಚಾರಕ್ಕೆ,ಇದೇ ವರ್ಷ ಸುಮಾರ 10 ಸಾವಿರಕ್ಕೂ ಹೆಚ್ಚಿನ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಈಗಾಗಲೇ ಡಿಜಿಯವರು ಹೇಳಿದ್ದಾರೆ. ಹೀಗಾಗಿ ಈ ವರ್ಷದಷ್ಟು ಸಿಬ್ಬಂದಿಗಳ ನೇಮಕ ಯಾವತ್ತೂ ಆಗಿಲ್ಲ.ಆದ್ರೆ, ಇಲಾಖೆ ಕೈಗೆ ಸಿಗಲಿಕ್ಕೆ ಇನ್ನೂ ಏಂಟರಿಂದ ಹತ್ತು ತಿಂಗಳು ಬೇಕಾಗುತ್ತದೆ. ನಂತರ ಸಿಬ್ಬಂದಿ ಕೊರತೆ ನೀಗಿಲಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.