ETV Bharat / state

ಏಳನೇ ವೇತನ ಆಯೋಗದ ಜಾರಿಗೆ ಆಗ್ರಹಿಸಿ ವಿಧಾನ ಪರಿಷತ್​ನಲ್ಲಿ ಬಿಜೆಪಿ ಧರಣಿ

7th Pay commission: ಏಳನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಬಿಜೆಪಿ ಸದಸ್ಯರು ವಿಧಾನ ಪರಿಷತ್​ ಕಲಾಪದಲ್ಲಿ ಧರಣಿ ನಡೆಸಿದ್ದಾರೆ.

ವಿಧಾನ ಪರಿಷತ್​ನಲ್ಲಿ ಬಿಜೆಪಿ ಧರಣಿ
ವಿಧಾನ ಪರಿಷತ್​ನಲ್ಲಿ ಬಿಜೆಪಿ ಧರಣಿ
author img

By ETV Bharat Karnataka Team

Published : Dec 6, 2023, 12:14 PM IST

ಬೆಳಗಾವಿ/ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಬಿಜೆಪಿ ಸದಸ್ಯರು ವಿಧಾನ ಪರಿಷತ್ ನಲ್ಲಿ ಧರಣಿ ಮುಂದುವರೆಸಿದ್ದು, ಸದನದಲ್ಲಿ ಗದ್ದಲದ ವಾತಾವರಣ ಸೃಷ್ಟಿಯಾದ ಹಿನ್ನೆಲೆಯಲ್ಲಿ ಪರಿಷತ್ ಕಲಾಪವನ್ನು 10 ನಿಮಿಷಗಳ ಕಾಲ ಸಭಾಪತಿ ಬಸವರಾಜ ಹೊರಟ್ಟಿ ಮುಂದೂಡಿಕೆ ಮಾಡಿದರು.

ಕುಂದಾನಗರಿ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಮೂರನೇ ದಿನದ ವಿಧಾನ ಪರಿಷತ್ ಕಲಾಪ ಆರಂಭಗೊಳ್ಳುತ್ತಿದ್ದಂತೆ 7ನೇ ವೇತನ ಆಯೋಗ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಸದಸ್ಯರು ಧರಣಿ ಮುಂದುವರೆಸಿದರು. ಈ ವೇಳೆ ಮಾತನಾಡಿದ ಬಿಜೆಪಿ ಸದಸ್ಯ ವೈ ಎ ನಾರಾಯಣ್ ಸ್ವಾಮಿ, 7ನೇ ವೇತನ ಆಯೋಗ ಜಾರಿ ಆಗಬೇಕು ಎಂದು ಒತ್ತಾಯ ಮಾಡಿದರು, ನಿನ್ನೆ ಸಭಾನಾಯಕರು ಕೊಟ್ಟ ಉತ್ತರ ಸಮರ್ಪಕವಾಗಿಲ್ಲ. ಮುಂದೆ ರಾಜ್ಯದಲ್ಲಿ ಸಾಲು ಸಾಲು ಚುನಾವಣೆ ಇದ್ದು, 7ನೇ ವೇತನ ಆಯೋಗ ಯಾವಾಗ ಜಾರಿ ಆಗುತ್ತದೆ ಅಂತ ಹೇಳಬೇಕೆಂದು ಒತ್ತಾಯ ಮಾಡಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ಸದಸ್ಯ ಸಲೀಂ ಅಹಮದ್, ಸರ್ಕಾರದಿಂದ ಈಗಾಗಲೇ ಉತ್ತರ ಕೊಡಲಾಗಿದೆ, ಸುಮ್ಮನೆ ಸದನದಲ್ಲಿ ಕಾಲಹರಣ ಮಾಡಬೇಡಿ, ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕು. ಹೀಗೆ ಧರಣಿ ಮಾಡಿ ಸದನದ ಟೈಂ ವೇಸ್ಟ್ ಮಾಡಬೇಡಿ ಎಂದರು. ಸಲೀಂ ಅಹಮದ್ ಮಾತಿಗೆ ಗರಂ ಆದ ಪ್ರತಿಪಕ್ಷ ಸದಸ್ಯರು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಈ ವೇಳೆ ಕಾಂಗ್ರೆಸ್ ಹಾಗು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಸದನದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಿಕೆ ಮಾಡಿದರು.

ಇದನ್ನೂ ಓದಿ: 'ನಾನು ಸಿಎಂ ಸಿದ್ದರಾಮಯ್ಯ ವಕ್ತಾರನಲ್ಲ': ಬಿ.ಕೆ. ಹರಿಪ್ರಸಾದ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.