ETV Bharat / state

ಹಳದಿ ಎಲೆ ಹಾಗೂ ಎಲೆ ಚುಕ್ಕೆ ರೋಗ ನಿವಾರಣೆಗೆ ಸೂಕ್ತ ಕ್ರಮ: ಕೃಷಿ ಸಚಿವ ಚಲುವರಾಯಸ್ವಾಮಿ - ಕೃಷಿ ಭಾಗ್ಯ ಯೋಜನೆ

ಎಲೆ ಚುಕ್ಕೆ ಹಾಗೂ ಹಳದಿ ಎಲೆ ರೋಗ ನಿವಾರಣೆಗಾಗಿ ವಿಶ್ವವಿದ್ಯಾಲಯದ ವಿಜ್ಞಾನಿಗಳು ಸಂಶೋಧನೆ ಕೈಗೊಂಡಿದ್ದಾರೆ. ಈಗಾಗಲೇ ಈ ಸಂಶೋಧನಾ ಕಾರ್ಯಕ್ಕಾಗಿ 52 ಲಕ್ಷ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಕೃಷಿ ಸಚಿವ ಚಲುವರಾಯಸ್ವಾಮಿ
ಕೃಷಿ ಸಚಿವ ಚಲುವರಾಯಸ್ವಾಮಿ
author img

By ETV Bharat Karnataka Team

Published : Dec 13, 2023, 4:56 PM IST

ಬೆಂಗಳೂರು/ ಬೆಳಗಾವಿ : ಅಡಕೆ ಬೆಳೆಗೆ ತಗಲುತ್ತಿರುವ ಎಲೆ ಚುಕ್ಕೆ ಹಾಗೂ ಹಳದಿ ಎಲೆ ರೋಗ ನಿವಾರಣೆಗಾಗಿ ವಿಶ್ವವಿದ್ಯಾಲಯದ ವಿಜ್ಞಾನಿಗಳು ಸಂಶೋಧನೆ ಕೈಗೊಂಡಿದ್ದಾರೆ ಎಂದು ತೋಟಗಾರಿಕಾ ಸಚಿವರ ಪರವಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಇಂದು ಶೂನ್ಯವೇಳೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, ಈಗಾಗಲೇ ಈ ಸಂಶೋಧನಾ ಕಾರ್ಯಕ್ಕಾಗಿ 52 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಸಂಶೋಧನೆಗೆ ಹೆಚ್ಚಿನ ಅನುದಾನದ ಅಗತ್ಯವಿದ್ದಲ್ಲಿ ಸರ್ಕಾರ ಬಿಡುಗಡೆ ಮಾಡಲು ಸಿದ್ಧವಿದೆ. ಈ ರೋಗಗಳ ನಿವಾರಣೆಗೆ ಸರ್ಕಾರ ಸೂಕ್ತ ಕ್ರಮವಹಿಸಿದೆ ಎಂದು ಹೇಳಿದರು.

ಅಡಕೆ ಬೆಳೆಗೆ ತಗುಲಿರುವ ಎಲೆಚುಕ್ಕೆ ರೋಗ ಹಾಗೂ ಹಳದಿ ಎಲೆ ರೋಗ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಆದಷ್ಟು ಬೇಗ ರೋಗ ತಡೆಗಟ್ಟಲು ಸಂಶೋಧನೆ ನಡೆಸಿ ಔಷಧಗಳನ್ನೂ ಕಂಡು ಹಿಡಿಯಲು ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಇದಕ್ಕೂ ಮುನ್ನ ಶಾಸಕ ಆರಗ ಜ್ಞಾನೇಂದ್ರ ಅವರು ವಿಷಯ ಪ್ರಸ್ತಾಪಿಸಿ, ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿನ ಪ್ರಮುಖ ಬೆಳೆಯಾಗಿರುವ ಅಡಿಕೆ ಬೆಳೆಗೆ ಕೆಲವು ತಿಂಗಳುಗಳಿಂದ ಹಳದಿ ಎಲೆ ರೋಗ ಮತ್ತು ಎಲೆ ಚುಕ್ಕೆ ರೋಗ ತಗಲುತ್ತಿದೆ. ಈ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಸಂಶೋಧನೆಗಾಗಿ ಸರ್ಕಾರ ನೀಡಿರುವ ಅನುದಾನ ಕಡಿಮೆ ಇದ್ದು, ಇನ್ನೂ ಹೆಚ್ಚಿನ ಅನುದಾನ ನೀಡಿ ರೋಗ ನಿವಾರಣೆಗೆ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಶೇ. 65ರಷ್ಟು ಅಡಕೆ ಬೆಳೆಯಲಾಗುತ್ತಿದೆ. ಅಡಕೆ ಬೆಳೆಗೆ ಹಳದಿ ಎಲೆ ರೋಗ ಮತ್ತು ಎಲೆಚುಕ್ಕೆ ರೋಗದಿಂದ ಅಡಕೆ ಬೆಳೆ ಇಳುವರಿ ಕುಸಿದಿದೆ. ಎಲೆಚುಕ್ಕೆ ರೋಗ ಗಾಳಿಯಲ್ಲಿ ಹರಡುತ್ತಿದ್ದು, ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲದೆ, ಬೆಳೆ ನಷ್ಟದಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ದುಃಸ್ಥಿತಿ ಬಂದಿದೆ ಎಂದು ಗಮನ ಸೆಳೆದರು.

ಬೆಳೆ ವಿಮೆ ಹಣ ಪಾವತಿಯಾಗಲಿದೆ : ರೈತರ ಹಿತಸಂರಕ್ಷಣೆ ರಾಜ್ಯ ಸರ್ಕಾರದ ಮೊದಲ ಆದ್ಯತೆಯಾಗಿದೆ. ಈಗಾಗಲೇ ರಾಜ್ಯದಲ್ಲಿ ತೀವ್ರ ಬರದ ಹಿನ್ನೆಲೆಯಲ್ಲಿ ಈ ಮಾಸಾಂತ್ಯದೊಳಗೆ, ಬೆಳೆ ವಿಮೆ ಹಣ ಪಾವತಿಯಾಗಲಿದೆ ಎಂದು ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಅವರು ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಪ್ರಶ್ನೋತ್ತರ ಅವಧಿಯಲ್ಲಿ ಇಂದು ಬಿಜೆಪಿ ಶಾಸಕ ಶರಣು ಸಲಗಾರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ವರ್ಷ ತೀವ್ರ ಬರ ಕಾಡಿದೆ. ಪ್ರಿವೆಂಟಿವ್ ಸೋಯಿಂಗ್ ಇನ್‌ವೋಕ್ ಹಾಗೂ ಮಿಡ್ ಸೀಜನ್ ಅಡ್ವರ್ಸಿಟಿಯಡಿ ಅಂದಾಜಿಸಲಾದ ಪರಿಹಾರ ಸುಮಾರು 450 ಕೋಟಿ ರೂ. ಭರಿಸಲಾಗಿದೆ. ಈಗಾಗಲೇ ಬೆಳೆ ಕಟಾವು ಸಮೀಕ್ಷೆ ಸಂಪೂರ್ಣ ಮುಗಿದಿದ್ದು, ಉಳಿದ ರೈತರಿಗೂ ವಿಮೆ ಹಣ ಶೀಘ್ರ ತಲುಪಲಿದೆ ಎಂದು ಮಾಹಿತಿ ನೀಡಿದರು.

ಬೆಳೆ ಕಟಾವು ಸಮೀಕ್ಷೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿ ಅಯನ್ವಯ ಹಿಂದಿನ ಏಳು ಸಾಲುಗಳಲ್ಲಿ ಐದು ವರ್ಷಗಳ ಸರಾಸರಿ ಇಳುವರಿ ಮಾನದಂಡವನ್ನಾಗಿ ಪರಿಗಣಿಸಲಾಗುತ್ತಿದೆ. ಇದನ್ನು ಬದಲಾಯಿಸುವಂತೆ ರಾಜ್ಯ ಸರ್ಕಾರದಿಂದ ಪತ್ರದ ಮೂಲಕ ಹಾಗೂ ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದರೂ ಸಹ ಈ ಮಾರ್ಗಸೂಚಿಯನ್ನು ಬದಲಾಯಿಸಲು ಕೇಂದ್ರ ಸರ್ಕಾರ ಸಮ್ಮತಿಸಿಲ್ಲ.

ಆದರೂ ರಾಜ್ಯದ ರೈತರ ಹಿತವನ್ನು ಕಾಯ್ದುಕೊಂಡು, ಯಾವುದೇ ತೊಂದರೆಯಾಗದಂತೆ ವಿಶೇಷ ಗಮನಹರಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಕೃಷಿ ಇಲಾಖೆೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅವರು ಈ ಜವಾಬ್ದಾರಿ ನಿಭಾಯಿಸಲಿದ್ದಾರೆ ಎಂದು ಹೇಳಿದರು.

ಕೃಷಿ ಭಾಗ್ಯ ಯೋಜನೆ ಚಾಲನೆ : ಶ್ರವಣಬೆಳಗೋಳ ಕ್ಷೇತ್ರದ ಶಾಸಕರಾದ ಸಿ. ಎಮ್ ಬಾಲಕೃಷ್ಣ ಅವರ ಪ್ರಶ್ನೆಗೆ ಉತ್ತರಿಸಿದ ಕೃಷಿ ಸಚಿವರು, ಕಳೆದ ಮೂರ್ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಕೃಷಿ ಭಾಗ್ಯ ಯೋಜನೆಗೆ ಮರು ಚಾಲನೆ ನೀಡಲಾಗಿದೆ. ಈಗಾಗಲೆ ಸಚಿವ ಸಂಪುಟದ ಅನುಮೋದನೆ ಪಡೆದು ಮಾರ್ಗಸೂಚಿ ಹೊರಡಿಸಲಾಗಿದೆ. ಶೀಘ್ರವೇ ಅನುಷ್ಠಾನಗೊಳಿಸಲಾಗುವುದು ಎಂದರು.

ಇದನ್ನೂ ಓದಿ : ಕಲಾಪದಲ್ಲಿ ಉತ್ತರ ಕರ್ನಾಟಕ ಚರ್ಚೆ: ನೀರಾವರಿ ಸಮಸ್ಯೆ ಬಗ್ಗೆ ಸರ್ಕಾರ ಗಮನ ಹರಿಸಲಿ- ಯತ್ನಾಳ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.