ETV Bharat / state

ಕಡಿಮೆಯಾದ ಮಳೆ ಪ್ರಮಾಣ: ಚಿಕ್ಕೋಡಿ ಉಪ ವಿಭಾಗದ ಸೇತುವೆಗಳು ಸಂಚಾರಕ್ಕೆ ಮುಕ್ತ!

ಚಿಕ್ಕೋಡಿ ಉಪ ವಿಭಾಗದಲ್ಲಿ ಅತಿ‌ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ. ಹಾಗಾಗಿ ಚಿಕ್ಕೋಡಿ ಉಪ ವಿಭಾಗದ ಎಲ್ಲಾ ಸೇತುವೆಗಳು ಇದೀಗ ಸಂಚಾರಕ್ಕೆ ಮುಕ್ತವಾಗಿವೆ.

chikkodi
ಸೇತುವೆ
author img

By

Published : Jul 12, 2020, 1:13 PM IST

ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಹಾಗೂ ಚಿಕ್ಕೋಡಿ ಉಪ ವಿಭಾಗದಲ್ಲಿ ಸ್ವಲ್ಪಮಟ್ಟಿಗೆ ಮಳೆ ಪ್ರಮಾಣ ಕಡಿಮೆಯಾಗಿದೆ. ಹಾಗಾಗಿ ಕೃಷ್ಣಾ, ವೇದಗಂಗಾ ಮತ್ತು ಧೂದ್​ಗಂಗಾ ನದಿಗಳ ನೀರಿನ ಹರಿವಿನ ಮಟ್ಟದಲ್ಲಿ ಸ್ವಲ್ಪ ಕಡಿಮೆಯಾಗಿದೆ.

ಸಂಚಾರಕ್ಕೆ ಮುಕ್ತವಾದ ಚಿಕ್ಕೋಡಿಯ ಸೇತುವೆಗಳು

ಒಟ್ಟು 69,868 ಕ್ಯೂಸೆಕ್ ನೀರು ನದಿಗೆ ಹರಿಯುತ್ತಿದ್ದು, ಚಿಕ್ಕೋಡಿ ಉಪ ವಿಭಾಗದ ಎಲ್ಲಾ ಸೇತುವೆಗಳು ಸಂಚಾರಕ್ಕೆ ಮುಕ್ತವಾಗಿವೆ ಎಂದು ಚಿಕ್ಕೋಡಿ ಉಪ ತಹಶೀಲ್ದಾರ್​ ಸಿ.ಎ.ಪಾಟೀಲ ಈಟಿವಿ ಭಾರತ್​ಗೆ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ 44,125 ಕ್ಯೂಸೆಕ್ ನೀರು ಹಾಗೂ ದೂಧ್​ಗಂಗಾ ನದಿಯಿಂದ 10,912 ಕ್ಯೂಸೆಕ್ ನೀರು ಸೇರಿ ಒಟ್ಟು 55,037 ಕ್ಯೂಸೆಕ್ ನೀರು ರಾಜ್ಯದ ಕೃಷ್ಣಾ ನದಿಗೆ ಹರಿದು ಬರುತ್ತಿದೆ.

ಚಿಕ್ಕೋಡಿ ಉಪ ವಿಭಾಗದಲ್ಲಿ ಅತಿ‌ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ. ದೂಧ್​ಗಂಗಾ ನದಿಗೆ ನಿರ್ಮಿಸಿರುವ ಕಾರದಗಾ-ಭೋಜ, ಭೋಜವಾಡಿ-ಕುನ್ನೂರ, ಸಿದ್ನಾಳ -ಅಕ್ಕೋಳ, ಮಲಿಕವಾಡ-ದತ್ತವಾಡ ಸೇತುವೆ, ವೇದಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕುನ್ನೂರ-ಬಾರವಾಡ ಸೇತುವೆ ಮತ್ತು ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಯಡೂರು-ಕಲ್ಲೋಳ ಸೇತುವೆ ಹೀಗೆ ಚಿಕ್ಕೋಡಿ ಉಪ ವಿಭಾಗದ ಆರು ಸೇತುವೆಗಳು ಕೂಡಾ ಇದೀಗ ಸಂಚಾರಕ್ಕೆ ಮುಕ್ತವಾಗಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.