ETV Bharat / state

ಮುಕ್ತ, ನ್ಯಾಯಸಮ್ಮತ ಚುನಾವಣೆಗೆ ಸಕಲ ಸಿದ್ಧತೆ: ಡಿಸಿ ನಿತೇಶ ಪಾಟೀಲ - ಈಟಿವಿ ಭಾರತ್ ಕನ್ನಡ ಸುದ್ದಿ

ಇಂದು ಸಂಜೆ 6 ಗಂಟೆಯ ನಂತರ ಬಹಿರಂಗ ಪ್ರಚಾರ ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್​ ಪಾಟೀಲ ಅವರು ತಿಳಿಸಿದರು.

ಡಿಸಿ ನಿತೇಶ ಪಾಟೀಲ
ಡಿಸಿ ನಿತೇಶ ಪಾಟೀಲ
author img

By

Published : May 8, 2023, 8:54 PM IST

ಡಿಸಿ ನಿತೇಶ ಪಾಟೀಲ

ಬೆಳಗಾವಿ: ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಹಿರಂಗ‌ ಪ್ರಚಾರವು ಸೋಮವಾರ ಸಂಜೆ‌ 6 ಗಂಟೆಗೆ ಅಂತ್ಯಗೊಂಡಿದ್ದು, ಯಾವುದೇ ರೀತಿಯ ಚುನಾವಣಾ ಬಹಿರಂಗ ಸಭೆ-ಸಮಾರಂಭಗಳಿಗೆ ಅವಕಾಶವಿರುವುದಿಲ್ಲ. ಯಾವುದೇ ಆತಂಕ, ಭಯವಿಲ್ಲದೆ ಆಮಿಷಕ್ಕೆ ಒಳಗಾಗದೇ ಮುಕ್ತವಾಗಿ ಹಾಗೂ ನಿರ್ಭಿತಿಯಿಂದ ಮತ ಚಲಾಯಿಸಬೇಕು‌ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಇಂದು ಮತ ಎಣಿಕೆ ಕೇಂದ್ರವಾದ ಟಿಳಕವಾಡಿಯ ಆರ್.ಪಿ.ಡಿ ಕಾಲೇಜಿನಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ‌ಚುನಾವಣಾ ಆಯೋಗದ‌ ಮಾರ್ಗಸೂಚಿ ಪ್ರಕಾರ, ಮತದಾನ ಅಂತ್ಯಗೊಳ್ಳಲಿರುವ ಅವಧಿಗಿಂತ 48 ಗಂಟೆಗಳ ಮುಂಚಿನ ಅವಧಿಯಲ್ಲಿ ಬಹಿರಂಗ ಪ್ರಚಾರಕ್ಕೆ ನಿರ್ಬಂಧನೆ ಇರುತ್ತದೆ. ಆದರೆ ಅಭ್ಯರ್ಥಿಗಳು ‌ಮನೆ‌ ಮನೆಗೆ ತೆರಳಿ ಪ್ರಚಾರ ಮಾಡಲು ಅವಕಾಶವಿರುತ್ತದೆ. ಇಂದು ಸಂಜೆ‌ 6 ಗಂಟೆಯ‌ ಬಳಿಕ ಬಹಿರಂಗ ಪ್ರಚಾರ ಕಂಡುಬಂದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಅದೇ ರೀತಿ ಬೇರೆ ಕ್ಷೇತ್ರಗಳಿಂದ ಪ್ರಚಾರಕ್ಕೆ ಬಂದವರು‌ ಆರು ಗಂಟೆ ನಂತರ ಅವರವರ ಊರುಗಳಿಗೆ ತೆರಳುವಂತೆ ಸೂಚಿಸಲಾಗಿದೆ. ಈ ಬಗ್ಗೆ ಹೋಟೆಲ್ ಮತ್ತು ಲಾಡ್ಜ್ ಮಾಲೀಕರ ಜೊತೆ ಚರ್ಚಿಸಲಾಗಿದೆ ಎಂದರು.

ಜಿಲ್ಲೆಯ 18 ವಿಧಾನಸಭಾ ಮತಕ್ಷೇತ್ರಗಳಲ್ಲಿ 20,424 ಸೇವಾ ಮತದಾರರು ಸೇರಿದಂತೆ ಒಟ್ಟು 39,67,574 ಜನರು ಮತ ಚಲಾಯಿಸಲಿದ್ದಾರೆ. 18 ರಿಂದ 19 ವಯೋಮಾನದ 94,652 ಯುವ ಮತದಾರರು ಜಿಲ್ಲೆಯಲ್ಲಿ ದಾಖಲಾಗಿದ್ದಾರೆ. 42,761 ವಿಕಲಚೇತನ ಮತದಾರರು, 80 ವರ್ಷ ಮೇಲ್ಪಟ್ಟಿರುವ 1,00,095 ಹಾಗೂ 151 ಇತರೆ ಮತದಾರರಿದ್ದಾರೆ ಎಂದು ಮಾಹಿತಿ ನೀಡಿದರು.

ಒಟ್ಟು 4439 ಮತಗಟ್ಟೆಗಳನ್ನು ರಚಿಸಲಾಗಿದೆ: ಜಿಲ್ಲೆಯ 18 ವಿಧಾನಸಭಾ ಮತಕ್ಷೇತ್ರಗಳಲ್ಲಿರುವ ಮತದಾರರ ಸಂಖ್ಯೆಗೆ ಅನುಗುಣವಾಗಿ 4,434 ಸಾಮಾನ್ಯ ಮತಗಟ್ಟೆಗಳು ಮತ್ತು 5 ಹೆಚ್ಚುವರಿ(ಆಗ್ಸಿಲರಿ) ಮತಗಟ್ಟೆಗಳು ಸೇರಿದಂತೆ ಒಟ್ಟು 4439 ಮತಗಟ್ಟೆಗಳನ್ನು ರಚಿಸಲಾಗಿದೆ. ಈ ಬಾರಿಯ ಚುನಾವಣೆಯಲ್ಲಿ ವಿಶೇಷ ವರ್ಗದ ಮತದಾರರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ರಾಜ್ಯದಲ್ಲಿಯೇ ಬೆಳಗಾವಿ ಜಿಲ್ಲೆಯಲ್ಲಿ ಅತೀ ಹೆಚ್ಚು ಜನರು ಮನೆಯಿಂದ ಮತದಾನ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟ 7362 ಮತದಾರರು ಹಾಗೂ 1708 ವಿಶೇಷ ಚೇತನರು ಸೇರಿದಂತೆ ಒಟ್ಟು 9070 ಜನ ಮನೆಯಿಂದಲೇ ಮತ ಚಲಾಯಿಸಲು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದರು. ಜಿಲ್ಲೆಯಲ್ಲಿ ಈ ಬಾರಿ 80 ವರ್ಷ ಮೇಲ್ಪಟ್ಟ 6975 ಹಿರಿಯ ನಾಗರಿಕರು ಮತ್ತು 1661 ವಿಶೇಷ ಚೇತನರು ಸೇರಿದಂತೆ ಒಟ್ಟು 8636 ಜನ ಮತದಾರರು ತಮ್ಮ ಮನೆಯಿಂದಲೇ ಮತ ಚಲಾಯಿಸಿದ್ದಾರೆ ಎಂದರು.

ಮುನ್ನೆಚ್ಚರಿಕೆ ಕ್ರಮ: ಒಟ್ಟು ಮತಗಟ್ಟೆಗಳ ಪೈಕಿ 300 ಸೂಕ್ಷ್ಮ (ಕ್ರಿಟಿಕಲ್) ಬೂತ್, 701 ವಲ್ನರೇಬಲ್ ಹಾಗೂ ಕ್ರಿಟಿಕಲ್ ಮತಗಟ್ಟೆಗಳೆಂದು ಗುರುತಿಸಿ ವಿಶೇಷ ಭದ್ರತೆ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಬಾರಿಗೆ ಜಿಲ್ಲೆಗೆ ಹೊಸ ವಿದ್ಯುನ್ಮಾನ ಯಂತ್ರ (ಇವಿಎಂ)ಗಳು ಬಂದಿದ್ದು, ಎಲ್ಲ ಯಂತ್ರಗಳನ್ನು ಈಗಾಗಲೆ ಆಯಾ ತಾಲೂಕು ಕೇಂದ್ರಗಳಿಗೆ ಪೂರೈಕೆ ಮಾಡಿ ಸೂಕ್ತ ಭದ್ರತೆ ಒದಗಿಸಲಾಗಿದೆ. ಚುನಾವಣೆಯಲ್ಲಿ ಮತದಾನ ನಿರ್ವಹಣೆಗಾಗಿ ಒಟ್ಟು 21,688 ಮತ್ತು ಮತ ಎಣಿಕೆ ನಿರ್ವಹಣೆಗಾಗಿ 1,188 ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನೇಮಿಸಲಾಗಿದೆ.

ಸರ್ಕಾರಿ ಬಸ್ ಸಹಿತ 1400 ವಾಹನಗಳನ್ನು ಚುನಾವಣೆಗಾಗಿ ಮೀಸಲಿರಿಸಲಾಗಿದೆ. ಮತದಾನದ ಮುನ್ನಾ ದಿನವಾದ ಮಂಗಳವಾರ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಮಾಸ್ಟರಿಂಗ್ ಕಾರ್ಯ ನಡೆಯಲಿದ್ದು, ಈ ಸಂದರ್ಭದಲ್ಲಿ ಚುನಾವಣೆಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಇವಿಎಂಗಳ ಸಹಿತ ಮತಗಟ್ಟೆ ಕೇಂದ್ರಗಳಿಗೆ ತೆರಳುತ್ತಾರೆ. ಜಿಲ್ಲೆಯಲ್ಲಿ ಒಟ್ಟು ತಲಾ 5,328 ಬ್ಯಾಲೆಟ್ ಯುನಿಟ್ ಮತ್ತು ಕಂಟ್ರೋಲ್ ಯುನಿಟ್ ಮತ್ತು 5,774 ವಿವಿಪ್ಯಾಟ್ ಯಂತ್ರಗಳು ಬಳಕೆಯಾಗಲಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಮತದಾನ ದಿನದಂದು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಅಧಿಕಾರಿಗಳ ಸಹಿತ ಒಟ್ಟು 10,113 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಆ ಪೈಕಿ 4,803 ಸಿವಿಲ್ ಪೊಲೀಸ್, 1,354 ಗೃಹ ರಕ್ಷಕ ದಳ, 19 ಕೆಎಸ್‌ಆರ್‌ಪಿ ತುಕಡಿ, 249 ಮೀಸಲು ಪಡೆಗಳು ಮತ್ತು 53 ಅರೆಸೇನಾ ತುಕಡಿಗಳು ಈಗಾಗಲೇ ಜಿಲ್ಲೆಗೆ ಆಗಮಿಸಿವೆ. ಮತದಾನ ದಿನದಂದು ಮತಗಟ್ಟೆಗಳ ಸಮೀಪ ರಾಜಕೀಯ ಪಕ್ಷಗಳಿಂದ ಆಗುವ ಜನದಟ್ಟಣೆ ತಡೆಗಟ್ಟುವ ಉದ್ದೇಶದಿಂದ ಈ ಬಾರಿ ಪ್ರತಿ ಮತಗಟ್ಟೆಯ 200 ಮೀಟರ್ ಹೊರಗಡೆ ಎಜೆಂಟ್ ಟೇಬಲ್ ಹಾಕಲು ಅವಕಾಶ ಕಲ್ಪಿಸಲಾಗಿದೆ. ಒಂದು ಟೇಬಲ್ ಮತ್ತು 2 ಕುರ್ಚಿ ಮಾತ್ರ ಬಳಕೆ ಮಾಡಬಹುದು. ‌

ಮತದಾನ ಮತ್ತು ಮತದಾನದ ಮುಂಚೆ ನಡೆಯುವ ನಿಯಮ ಬಾಹಿರ ಚಟುವಟಿಕೆಗಳನ್ನು ತಡೆಗಟ್ಟಲು 351 ಸೆಕ್ಟರ್ ಮ್ಯಾಜಿಸ್ಟ್ರೇಟರ್ ನೇತೃತ್ವದಲ್ಲಿ 180 ತಂಡಗಳನ್ನು ರಚಿಸಿದ್ದು, ಎಲ್ಲ ತಂಡಗಳು ಈಗಾಗಲೇ ಕಾರ್ಯಾಚರಣೆಗೆ ಇಳಿದಿದ್ದಾರೆ. ಬಹಿರಂಗ ಪ್ರಚಾರ ಕೊನೆಗೊಂಡಿರುವುದರಿಂದ ಜಿಲ್ಲೆಗೆ ಆಗಮಿಸಿರುವ ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳ ಮುಖಂಡರು ಕೂಡ ಜಿಲ್ಲೆ ಬಿಟ್ಟು ಹೊರಹೋಗಬೇಕು. ಅಂತವರು ಜಿಲ್ಲೆಯಲ್ಲಿ ಕಂಡು ಬಂದರೆ ನೇರವಾಗಿ ಚುನಾವಣಾ ಆಯೋಗ ಅಥವಾ ಸಿ-ವಿಜಿಲ್ ಆ್ಯಪ್ ಮೂಲಕ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳು ಸಾರ್ವಜನಿಕರಿಗೆ ವಿನಂತಿಸಿಕೊಂಡಿದ್ದಾರೆ.

ಬೆಳಗಾವಿ, ಚಿಕ್ಕೋಡಿ ಮತ್ತು ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಯ 18 ಮತಕ್ಷೇತ್ರಗಳನ್ನು ಪ್ರತಿನಿಧಿಸಿ ಒಟ್ಟು 187 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇದರಲ್ಲಿ 174 ಪುರುಷರು ಹಾಗೂ 13 ಮಹಿಳೆಯರಿದ್ದಾರೆ. ಒಟ್ಟು 360 ಜನರು ನಾಮಪತ್ರ ಸಲ್ಲಿಸಿದ್ದು, 25 ನಾಮಪತ್ರಗಳು ತಿರಸ್ಕೃತಗೊಂಡಿರುತ್ತವೆ. 47 ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದರು.

69 ನೀತಿ ಸಂಹಿತೆ ಕೇಸ್ ದಾಖಲು : ಜಿಲ್ಲೆಯಲ್ಲಿ ಈವರೆಗೆ ಒಟ್ಟು 69 ನೀತಿ ಸಂಹಿತೆ ಉಲ್ಲಂಘನೆಗೆ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದ್ದು, ಒಟ್ಟು ಈವರೆಗೆ 26.18 ಕೋಟಿ ರೂ. ಮೌಲ್ಯದ ನಗದು ಸಹಿತ ವಿವಿಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅದರಲ್ಲಿ 17.07 ಕೋಟಿ ರೂ.ನಗದು ಇದ್ದರೆ, 2.5 ಕೋಟಿ ರೂ. ಮೌಲ್ಯದ ಮದ್ಯದ ವಸ್ತುಗಳಿವೆ. ಜಪ್ತಿ ಮಾಡಿದ ನಗದು ಪೈಕಿ ದಾಖಲೆ ಸಲ್ಲಿಸಿದವರಿಗೆ ಸಂಬಂಧಿಸಿದ 3 ಕೋಟಿ ರೂ. ನಗದು ಮರಳಿ ನೀಡಲಾಗಿದೆ.

ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಸಂಜೀವ ಪಾಟೀಲ ಮಾತನಾಡಿ, 9 ಸಾವಿರಕ್ಕೂ ಅಧಿಕ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಜಿಲ್ಲೆಯಲ್ಲಿ ನಿಯೋಜಿಸಲಾಗಿದೆ. ಗೋವಾ, ಮಹಾರಾಷ್ಟ್ರದಿಂದ ಗೃಹರಕ್ಷಕ ಸಿಬ್ಬಂದಿ ಆಗಮಿಸಿರುತ್ತಾರೆ. ಎಲ್ಲರನ್ನೂ ಬಳಸಿಕೊಂಡು ಭಯಮುಕ್ತ ಮತದಾನದ ವಾತಾವರಣವ ಸೃಷ್ಟಿಸಲಾಗಿದೆ.

ನೆರೆಯ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯದ ಉನ್ನತ ಪೊಲೀಸ್ ಅಧಿಕಾರಿಗಳ ಜತೆಗೂ ಚರ್ಚಿಸಿ ಜಂಟಿ ಚೆಕ್ ಪೋಸ್ಟ್ ನಿರ್ಮಿಸಲಾಗಿದೆ. ಮತದಾರರಿಗೆ ಆಮಿಷ ಒಡ್ಡುವುದನ್ನು ತಡೆಗಟ್ಟಲು ಮತ್ತು ಭಯಮುಕ್ತ ವಾತಾವರಣ ಸೃಷ್ಟಿಗೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ ಆಮಿಷಕ್ಕೆ ಬಲಿಯಾಗದೆ ಮತದಾನ ಮಾಡಬೇಕು ಎಂದು ಮನವಿ ಮಾಡಿಕೊಂಡರು.

ಇದನ್ನೂ ಓದಿ : ವಿಧಾನಸಭಾ ಚುನಾವಣೆಗೆ ಬೆಂಗಳೂರು ಪೊಲೀಸರ ಸಕಲ ಸಿದ್ಧತೆ: ನಿರ್ಭೀತ ಮತದಾನಕ್ಕೆ ವೇದಿಕೆ ಸಿದ್ಧ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.