ಬೆಳಗಾವಿ : ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ. ಆರೋಪಿಯನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಶಾಸಕ ಅಭಯ್ ಪಾಟೀಲ್ ಅವರು ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಬಳಿಕ ಶಾಸಕ ಅಭಯ್ ಪಾಟೀಲ್ ಮಾತನಾಡಿ, "ಮತಾಂಧ ವ್ಯಕ್ತಿಯೊರ್ವ ಶಿವಾಜಿ ಮಹಾರಾಜರ ಭಾವಚಿತ್ರವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾನೆ. ಹಲವು ಫೇಕ್ ಅಕೌಂಟ್ಗಳನ್ನು ಆತ ಕ್ರಿಯೆಟ್ ಮಾಡಿದ್ದು ಯಾವ ಊರಿನ ಯುವಕ ಎಂದು ಗೊತ್ತಿಲ್ಲ. ತಪ್ಪಿತಸ್ಥನ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು" ಎಂದು ಪೊಲೀಸ್ ಆಯುಕ್ತರನ್ನು ಒತ್ತಾಯಿಸಿದ್ದಾರೆ.
ಇದನ್ನೂ ಓದಿ :ಕಬ್ಬು ಕಟಾವು ವಿಚಾರದಲ್ಲಿ ಸಹೋದರರ ನಡುವೆ ಜಗಳ : ಗುಂಡಿನ ದಾಳಿ